ಜನಜಾಗೃತಿಯಿಂದ ವನ್ಯಜೀವಿ ಸಂರಕ್ಷಣೆ ಸಾಧ್ಯ:ಈಶ್ವರ ಖಂಡ್ರೆ

ಬೆಂಗಳೂರು

    ಅರಣ್ಯ, ಪರಿಸರ ಮತ್ತು ವನ್ಯಜೀವಿಗಳನ್ನು ಕಾನೂನಿನಿಂದ ಮಾತ್ರ ಸಂರಕ್ಷಣೆ ಮಾಡಲು ಸಾಧ್ಯವಿಲ್ಲ. ಜನರ ಪಾಲ್ಗೊಳ್ಳುವಿಕೆ ಹಾಗೂ ಜನಜಾಗೃತಿ ಇದಕ್ಕೆ ಅತ್ಯಂತ ಅವಶ್ಯಕ ಎಂದು ಅರಣ್ಯ, ಜೀವಿ ಶಾಸ್ತç ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯ ಪಟ್ಟಿದ್ದಾರೆ.

    ಅಕ್ಟೋಬರ್ 2ರಿಂದ 8 ರವರೆಗೆ ನಡೆದ 69ನೇ ವನ್ಯಜೀವಿ ಸಪ್ತಾಹದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡುತ್ತಿದ್ದರು. ಜನರಲ್ಲಿ ಅರಣ್ಯ ವನ್ಯಜೀವಿಗಳ ಮಹತ್ವವನ್ನು ತಿಳಿಸುವ ಅಗತ್ಯವಿದ್ದು, ಶಾಲಾ ಮಕ್ಕಳಿಗೆ ಪಠ್ಯದಲ್ಲಿಯೇ ವನ್ಯಜೀವಿಗಳು ಮತ್ತು ಅರಣ್ಯದ ಮಹತ್ವದ ಬಗ್ಗೆ ತಿಳಿಯ ಹೇಳುವ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು.

    ಈ ಸಪ್ತಾಹದ ಸಂದರ್ಭದಲ್ಲಿ ಹಳೆಯ ವಾಹನಗಳ ಯಾನ, ವಿವಿಧ ಸ್ಪರ್ಧೆಗಳು, ವನ್ಯಜೀವಿಗಾಗಿ ನಡಿಗೆ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಮೂಲಕ ಜನರಿಗೆ ಅರಿವು ಮೂಡಿಸಲಾಯಿತು ಎಂದರು. ಸಸ್ಯ ಶ್ಯಾಮಲಾ ಕಾರ್ಯಕ್ರಮದಲ್ಲಿ ಈವರೆಗೆ ಐದು ಲಕ್ಷ ಸಸಿಗಳನ್ನು ಸರ್ಕಾರಿ ಶಾಲೆಯ ಆವರಣ ಮತ್ತು ಸುತ್ತಮುತ್ತ ನೆಡಲಾಗಿದೆ. ಮಕ್ಕಳಿಗೆ ಅವುಗಳ ಪೋಷಣೆಯ ಹೊಣೆ ನೀಡಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಕರ್ನಾಟಕ ರಾಜ್ಯ ಅರಣ್ಯ ಸಂರಕ್ಷಣೆ ವನ್ಯಜೀವಿ ಸಂರಕ್ಷಣೆ ಮತ್ತು ಪರಿಸರ ಸಂರಕ್ಷಣೆಯಲ್ಲಿ ಕರ್ನಾಟಕ ದೇಶಕ್ಕೇ ಮಾದರಿಯಾಗುವಂತೆ ಕಾರ್ಯನಿರ್ವಹಿಸಿ ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap