ಜಯದೇವ ಹೃದ್ರೋಗ ಸಂಸ್ಥೆಯಿಂದ ಹೊಸ ದಾಖಲೆ….!

ಬೆಂಗಳೂರು

     ಜಯದೇವ ಹೃದ್ರೋಗ ಸಂಸ್ಥೆಯಿಂದ 52 ಲಕ್ಷ ಹೃದಯ ರೋಗಿಗಳಿಗೆ ಚಿಕಿತ್ಸೆ ನೀಡಿ ದಾಖಲೆ ನಿರ್ಮಿಸಲಾಗಿದೆ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಮಂಜುನಾಥ್ ಹೇಳಿದ್ದಾರೆ.

    ಜಯನಗರದ ಚಂದ್ರಗುಪ್ತಮೌರ್ಯ ಆಟದ ಮೈದಾನದಲ್ಲಿ ರಕ್ಷಾ ಫೌಂಡೇಷನ್ ನಿಂದ 11ನೇ ವರ್ಷದ ಸಮಾಜಸೇವಾ ಕಾರ್ಯಕ್ರಮದಲ್ಲಿ 10ಸಾವಿರ ಮಕ್ಕಳಿಗೆ 1.5 ಲಕ್ಷ ಉಚಿತ ನೋಟ್ ಪುಸ್ತಕಗಳು, ಕಲಿತಾ ಪರಿಕರಗಳ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಯದೇವ ಸಂಸ್ಥೆ ಮಾನವೀಯತೆ ಮತ್ತು ಹೃದಯ ವೈಶಾಲ್ಯದಿಂದ ಕಾರ್ಯನಿರ್ವಹಿಸುತ್ತಿದೆ. ಸೇವಾ ಮನೋಭಾವನೆಯಿಂದಾಗಿ ದಾಖಲೆ ನಿರ್ಮಿಸಲು ಸಾಧ್ಯವಾಗಿದೆ. ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಬೇಕು. ಶಿಕ್ಷಣ ಮತ್ತು ಸಂಸ್ಕಾರ ಬದುಕಿನ ಸೂತ್ರಗಳು. ಇದು ಕಂಪ್ಯೂಟರ್ ಲ್ಯಾಪ್ ಟಾಪ್ ಯುಗವಾಗಿ ಪರಿವರ್ತನೆಯಾಗಿದ್ದು, ಮಕ್ಕಳು ಪೆನ್ನು ಬಳಸಿ ಬರೆದರೆ ಮಿದುಳಿಗೆ ಒಳ್ಳೆಯದು ಎಂದರು.

    ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಮಾತನಾಡಿ, ಮಕ್ಕಳಿಗೆ ಶಿಕ್ಷಣಕ್ಕೆ ಬೇಕಾದ ಪುಸ್ತಕ, ಪರಿಕರಗಳನ್ನು ಒದಗಿಸಿದರೆ ವಿದ್ಯಾದಾನ ಮಾಡಿದಂತಾಗುತ್ತದೆ. ಅವಶ್ಯಕತೆ ಇರುವ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಬೇಕು. ವಿದ್ಯಾರ್ಥಿಗಳು ಉತ್ತಮ ಅಂಕಗಳಿಸಿ ಸಮಾಜಕ್ಕೆ ಮಾದರಿಯಾಗಬೇಕು. ಜ್ಞಾನರ್ಜನೆಗೆ ಶಿಕ್ಷಣವೇ ಮಾರ್ಗಾಗಿದೆ. ಶಿಕ್ಷಣ ಪಡೆದವರು ದೇಶ, ಭಾಷೆ ಮತ್ತು ನಮ್ಮ ಸಂಪ್ರಾದಯ ಮರೆಯಬಾರದು ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap