ಬೆಂಗಳೂರು
ನೀವು ಸರಕಾರದ ಮುಖ. ನಿಮ್ಮ ಕಾರ್ಯವೈಖರಿ ಸರಕಾರದ ಹಣೆಬರಹ ನಿರ್ಧರಿಸುತ್ತದೆ. ನೀವು ಸರಿಯಾಗಿ ಕೆಲಸ ಮಾಡದಿದ್ದರೆ ಸರಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ರೆವಿನ್ಯು ಇನ್‌ಸ್ಪೆಕ್ಟರ್‌ಗಳು, ಪಿಡಿಓಗಳು ಕಾರ್ಯವೈಖರಿ ಸರಕಾರದ ವರ್ಚಸ್ಸಿನ ಮೇಲೆ ಪರಿಣಾಮ ಬೀರುತ್ತದೆ.
ಅವರ ಬಗ್ಗೆ ಗಮನ ಹರಿಸಿ. ವೈಯಕ್ತಿಕ ಕಾರ್ಯಸೂಚಿ ಇಟ್ಟುಕೊಂಡು ಕೆಲಸ ಮಾಡುವುದು ಬೇಡ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಉತ್ತಮ ಸಹಕಾರ ನೀಡಿದ್ದೀರಿ. ಅದಕ್ಕೆ ಅಭಿನಂದನೆಗಳು ಎಂದು ಹೇಳಿದರು.
ಶೇಕಡಾ 70 ರಷ್ಟು ಅಧಿಕಾರಿಗಳು ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರದಲ್ಲಿ ಉಳಿದುಕೊಂಡು ಕೆಲಸ ಮಾಡುತ್ತಿಲ್ಲ. ಇದರಿಂದ ಅವರುಜನರಿಗೆ ಸರಿಯಾಗಿ ಸಿಗುತ್ತಿಲ್ಲ. ಇದರಿಂದಲೂ ಸರಕಾರಕ್ಕೆ ಕೆಟ್ಟ ಹೆಸರು. ಸರಕಾರದ ಕೈಪಿಡಿ ನಿಯಮಗಳನ್ನು ಪಾಲಿಸಬೇಕು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
