ಜೆಪಿ ನಡ್ಡಾ ಭೇಟಿ ಬೊಮ್ಮಾಯಿ

ಬೆಂಗಳೂರು:

     ಮಾಜಿ ಮುಖ್ಯಮಂತ್ರಿ ಹಾಗೂ  ಹಿರಿಯ ಮುಖಂಡ ಬಸವರಾಜ ಬೊಮ್ಮಾಯಿ ಅವರು ಬುಧವಾರ ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಬಿಜೆಪಿ ಸಂಘಟನೆಯ ವಿಷಯಗಳ ಕುರಿತು ಚರ್ಚಿಸಿದರು. ಮಂಗಳವಾರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದರು.

     ಈ ಸಂಬಂಧ ಟ್ವೀಟ್ ಮಾಡಿರುವ ಬಸವರಾಜ ಬೊಮ್ಮಾಯಿ, ನಮ್ಮ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಹೊಸದಿಲ್ಲಿಯಲ್ಲಿ ಹಲವು ಸಾಂಸ್ಥಿಕ ವಿಷಯಗಳ ಕುರಿತು ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ. ಪಕ್ಷಕ್ಕೆ  ಹೊಸ ರಾಜ್ಯಾಧ್ಯಕ್ಷ ಮತ್ತು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರನ್ನು ನೇಮಕ ಮಾಡದ ಕಾರಣ ಸಭೆಗಳು ಮಹತ್ವ ಪಡೆದುಕೊಂಡಿವೆ.

    ಮೂಲಗಳ ಪ್ರಕಾರ, ಸಂಸತ್ ಅಧಿವೇಶನದ ನಂತರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ನಡ್ಡಾ ಬೊಮ್ಮಾಯಿ ಅವರಿಗೆ ಭರವಸೆ ನೀಡಿದರು ಎನ್ನಲಾಗಿದೆ. ಅಲ್ಲದೆ, 2024ರ ಲೋಕಸಭೆ ಚುನಾವಣೆಗೆ ಮುನ್ನ ಕರ್ನಾಟಕದಲ್ಲಿ ಕಾಂಗ್ರೆಸ್ ಅನ್ನು ಎದುರಿಸಲು ಬಿಜೆಪಿಯ ಕಾರ್ಯತಂತ್ರ ಏನು ಎಂದು ನಡ್ಡಾ ಮತ್ತು ಬೊಮ್ಮಾಯಿ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಆದಷ್ಟು ಬೇಗ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ನಡ್ಡಾ ಬೊಮ್ಮಾಯಿ ಅವರಿಗೆ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬೊಮ್ಮಾಯಿ ಅವರು ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಇದೇ ಮನವಿ ಮಾಡಿದ್ದಾರೆ. ಷಾ ಕೂಡ ಬೊಮ್ಮಾಯಿ ಅವರಿಗೆ ಆದಷ್ಟು ಬೇಗ ಈ ವಿಷಯವನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap