ಟೋಲ್‌ ದರ ಏರಿಕೆ : ಇದು ಅನ್ಯಾಯದ ಪರಮಾವಧಿ : ಹೆಚ್‌ ಡಿ ಕೆ

ಬೆಂಗಳೂರು:

    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಯಾರಿಗೂ ಗೊತ್ತಿಲ್ಲದಂತೆ ಶೇ 22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ. ಇದು ಖಂಡನೀಯ. ಕೇಂದ್ರದ ಬಿಜೆಪಿ ಮತ್ತು ರಾಜ್ಯದ ಕಾಂಗ್ರೆಸ್‌ ಸರ್ಕಾರಗಳೆರಡೂ ಸೇರಿ ಜನರ ಮೇಲೆ ಮತ್ತಷ್ಟು ಭಾರ ಹೊರಿಸಿವೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರ ಸ್ವಾಮಿ  ದೂರಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಎಕ್ಸ್‌ಪ್ರೆಸ್ ಹೆದ್ದಾರಿಗೆ ಭೂಮಿ ಕೊಟ್ಟಿದ್ದು ಕರ್ನಾಟಕ ಸರ್ಕಾರ. ಇದ್ದ ನೆಲೆ ಕಳೆದುಕೊಂಡವರು ನಮ್ಮ ರೈತರು. ಈಗ ಶೇ 20ರಷ್ಟು ಸುಲಿಗೆಗೆ ಒಳಗಾಗುತ್ತಿರುವವರು ಕೂಡ ಕನ್ನಡಿಗರೇ. ಕನ್ನಡಿಗರನ್ನು ಕೊಳ್ಳೆ ಹೊಡೆಯುವ ಧೂರ್ತ ನಡೆಗೆ ನಮ್ಮ ಧಿಕ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ.

   ‘ಏಕಾಏಕಿ ಈ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ 30ರಿಂದ 200 ರು. ವರೆಗೆ ಟೋಲ್ ದರ ಹೆಚ್ಚಳ ಮಾಡಿರುವುದು ಸರಿಯಲ್ಲ, ಸಮರ್ಥನಿಯವೂ ಅಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿ ಟೋಲ್ ದರ ಹೆಚ್ಚಿಸಿರುವುದು ಹೆದ್ದಾರಿಯಲ್ಲಿ ಹಗಲು ದರೋಡೆಯಷ್ಟೇ ಸರಿ’ ಎಂದು ಟೀಕಿಸಿದ್ದಾರೆ.

    ಕೇಂದ್ರ, ರಾಜ್ಯ ಸರ್ಕಾರಗಳು ಬೆಲೆ ಏರಿಕೆಯನ್ನೇ ಅಧಿಕೃತ ವ್ಯವಹಾರ ಮಾಡಿಕೊಂಡಿವೆ. ಇನ್ನೂ ರಾಜ್ಯದ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಗಳೆಂಬ ತುಪ್ಪ ಸವರಿ, ಅದೇ ಗ್ಯಾರಂಟಿಗಳ ಇಲಾಖೆಗಳ ಮೂಲಕವೇ ಜನರ ಮೇಲೆ ಮಣಭಾರ ಹೇರುತ್ತಿದೆ. ಒಂದು ಕೈಯಲ್ಲಿ ಕೊಟ್ಟು ಎರಡು ಕೈಗಳಲ್ಲಿ ಬರೆ ಎಳೆಯುತ್ತಿದೆ’ ಎಂದು ಕುಮಾರಸ್ವಾಮಿ ಗುಡುಗಿದ್ದಾರೆ.

    ಹೆದ್ದಾರಿ ಪ್ರಾಧಿಕಾರವು ಹೆಚ್ಚಳ ಮಾಡಿರುವ ಟೋಲ್ ದರವನ್ನು ಕೂಡಲೇ ಹಿಂಪಡೆಯಬೇಕು. ಹೆದ್ದಾರಿ ಪ್ರಾಧಿಕಾರದ ಮೇಲೆ ರಾಜ್ಯ ಸರ್ಕಾರ ಒತ್ತಡ ಹಾಕಬೇಕು. ಬೆಲೆ ಬರೆ ಬವಣೆಯಿಂದ ಬಸವಳಿದಿರುವ ಜನರು ರೊಚ್ಚಿಗೇಳುವ ಮುನ್ನ ಟೋಲ್ ದರ ಇಳಿಯಬೇಕು ಎಂದು ಎಚ್‌ಡಿಕೆ ಆಗ್ರಹಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap