ಬೆಂಗಳೂರು:
ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಇಂದು ಜಾಮೀನು ಮಂಜೂರು ಮಾಡಿದೆ.
ದೆಹಲಿಯ ಡಿಕೆಶಿ ನಿವಾಸದ ಮೇಲೆ ಐ.ಟಿ.ಇಲಾಖೆಯು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಆರ್ಥಿಕ ಅಪರಾಧ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು. ಈ ಹಿಂದೆ ವಿಚಾರಣೆ ನಡೆಸಿದ ನ್ಯಾಯಾಲಯವು ಸೆಪ್ಟೆಂಬರ್ 20 ರಂದು ವಿಚಾರಣೆ ನಡೆಸಲು ದಿನಾಂಕವನ್ನು ನೀಡಿತ್ತು.
ಸಚಿವ ಡಿ.ಕೆ.ಶಿವಕುಮಾರ್ ಅವರು, ಸೆಪ್ಟೆಂಬರ್ 20 ರ ಬದಲಾಗಿ 15 ರಂದೇ ವಿಚಾರಣೆ ನಡೆಸುವಂತೆ ಡಿಕೆಶಿ ಪರ ವಕೀಲರು ಮನವಿ ಮಾಡಿದ್ದರು. ಈ ಕಾರಣದಿಂದಾಗಿ ವಿಚಾರಣೆ ನಡೆಸಿದ ನ್ಯಾಯಾಲಯ ಡಿಕೆಶಿಗೆ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ