ದೆಹಲಿ : ಆನ್‌ ಲೈನ್‌ ಡಿಲೆವರಿಗೆ ನಿರ್ಭಂಧ….!

ನವದೆಹಲಿ : 

     ಜಿ 20 ಸಮ್ಮೇಳನದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಅಭೂತಪೂರ್ವ ಬಂದೋಬಸ್ತ್ ವ್ಯವಸ್ಥೆ ಜಾರಿಯಾಗಿದೆ. ಸ್ವಿಗ್ಗಿ, ಝೊಮ್ಯಾಟೋ ಸೇರಿದಂತೆ ಎಲ್ಲಾ ರೀತಿಯ ಡೆಲಿವರಿಗೂ ನಿರ್ಬಂಧ ಹೇರಲಾಗಿದೆ.

     ಜಿ 20 ನಾಯಕರ ಶೃಂಗಸಭೆಯು ಸೆಪ್ಟೆಂಬರ್ 9 ಮತ್ತು 10 ರವರೆಗೆ ನವದೆಹಲಿಯ ಪ್ರಗತಿ ಮೈದಾನದಲ್ಲಿರುವ ಭಾರತ ಮಂಟಪದಲ್ಲಿ ಹೊಸದಾಗಿ ನಿರ್ಮಿಸಲಾದ ಅಂತರರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ನಡೆಯಲಿದೆ. ಇದಕ್ಕಾಗಿ ಎಲ್ಲಾ ಸಿದ್ದತೆಗಳು ನಡೆಯುತ್ತಿದ್ದು ದೆಹಲಿ ನಗರ ಸಿಂಗಾರಗೊಳ್ಳುತ್ತಿದೆ.    

    ಜಿ 20 ಉನ್ನತ ಮಟ್ಟದ ಸಭೆಯಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಆನ್‌ಲೈನ್ ವಿತರಣೆ ಮತ್ತು ವಾಣಿಜ್ಯ ಸೇವೆಗಳನ್ನು ಸ್ಥಗಿತಗೊಳಿಸುವುದು ಸೇರಿದಂತೆ ನವದೆಹಲಿ ಜಿಲ್ಲೆಯಲ್ಲಿ ಹಲವಾರು ನಿರ್ಬಂಧಗಳನ್ನು ವಿಧಿಸಲಾಗಿದೆ.

   ಮುಂಜಾಗ್ರತಾ ಕ್ರಮದ ಹಿನ್ನೆಲೆಯಲ್ಲಿ ನಗರದ ಎಲ್ಲಾ ಹೋಟೆಲ್, ವಾಣಿಜ್ಯ ಸಂಸ್ಥೆಗಳು, ಮಾರುಕಟ್ಟೆಗಳು, ಆಹಾರ ವಿತರಣೆ ಮತ್ತು ವಾಣಿಜ್ಯ ವಿತರಣಾ ಸೇವೆಗಳನ್ನು ಮೂರು ದಿನಗಳವರೆಗೆ ಮುಚ್ಚಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಸ್ವಿಗ್ಗಿ, ಝೊಮ್ಯಾಟೋ, ಅಮೆಜಾನ್, ಫ್ಲಿಪ್ಕಾರ್ಟ್ ನಂತಹ ಯಾವುದೇ ರೀತಿಯ ಆನ್ ಲೈನ್ ವಿತರಣೆಗೆ ನಿರ್ಬಂಧ ಹೇರಲಾಗಿದೆ. ಆದಾಗಿಯೂ ಆರೋಗ್ಯ ಸೇವೆ ಮೆಡಿಕಲ್ ಮತ್ತಿತರ ವಿತರಣೆಗೆ ಅವಕಾಶ ಕಲ್ಪಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap