ನವದೆಹಲಿ:
ದಾಖಲೆಯ ಪ್ರಮಾಣದಲ್ಲಿ ಹೊಸ ಸೋಂಕಿತರು ಪತ್ತೆಯಾಗುವ ಪರ್ವ ದೇಶದಲ್ಲಿ ಮುಂದುವರೆಸಿದ್ದು, ಭಾನುವಾರ ಕೂಡ ಭಾರತದಲ್ಲಿ 94,372 ಜನರದಲ್ಲಿ ಕೊರೋನಾ ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 47 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ ಕೆಲ ದಿನಗಳಿಂದ ನಿತ್ಯ 90,000ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್ದು, ಇದೇ ರೀತಿ ಮುಂದುವರೆದರೆ ಇನ್ನು 3 ದಿನಗಳಲ್ಲಿ ಸೋಂಕಿತರ ಸಂಖ್ಯೆ 50 ಲಕ್ಷ ಗಡಿ ದಾಟುವುದು ಖಚಿತವಾಗಿದೆ. ಪ್ರಸ್ತುತ ದೇಶದಲ್ಲಿ ಸೋಂಕಿತರ ಸಂಖ್ಯೆ 47,54,357ಕ್ಕೆ ತಲುಪಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ