ನವದೆಹಲಿ:
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,205 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 19,509 ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ ದಿನ 31 ಮಂದಿ ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 5,23,920 ಆಗಿದೆ.
ದೇಶದಲ್ಲಿ ಸೋಂಕಿನಿಂದ ಚೇತರಿಕೆ ಪ್ರಮಾಣ ಶೇ. 98.74 ರಷ್ಟಿದೆ. ನಿನ್ನೆ 2,802 ಮಂದಿ ಗುಣಮುಖರಾಗಿದ್ದು, ಈ ವರೆಗೆ 4,25,44,689 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ದೈನಂದಿನ ಪಾಸಿಟಿವಿಟಿ ದರ ಶೇ 0.98ಕ್ಕೇರಿಕೆಯಾಗಿದೆ. ಸಾಪ್ತಾಹಿಕ ಪಾಸಿಟಿವಿಟಿ ದರ ಶೇ.0.76 ಇದೆ.
ಕಳೆದೊಂದು ದಿನದಲ್ಲಿ 3,27,327 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಒಟ್ಟು ಪರೀಕ್ಷೆಗಳ ಸಂಖ್ಯೆ 83.89 ಕೋಟಿಯಾಗಿದೆ. ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಅಡಿ ನಿರ್ವಹಿಸಲಾದ ಒಟ್ಟು ಲಸಿಕೆಯ ಡೋಸ್ಗಳ ಸಂಖ್ಯೆ 189.48 ಕೋಟಿ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
