ಬೆಂಗಳೂರು : ಜೆ.ಜೆ ನಗರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನಗಳನ್ನು ಖದ್ದು ಎಸ್ಕೇಪ್ ಆಗುತ್ತದ್ದ ಖರ್ತನಾಕ್ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ.
ರಾತ್ರಿ ಮನೆಯ ಮುಂಭಾಗ ನಿಲ್ಲಿಸಿದ ವಾಹನಗಳನ್ನು ಟಾರ್ಗೆಟೆ ಮಾಡುತ್ತಿದ್ದ ಗ್ಯಾಂಗ್ ಮಧ್ಯ ರಾತ್ರಿಯಲ್ಲಿ ಬೈಕ್‍ಗಳ ಹ್ಯಾಂಡ್ ಲಾಕ್ ಮುರಿದು ಕ್ಷಣಾರ್ಧದಲ್ಲಿ ಕದ್ದು ಎಸ್ಕೇಪ್ ಆಗುತ್ತಿದ್ದ ಖಧೀಮರ ಬಗ್ಗೆ ಬೈಕ್ ಕಳೆದುಕೊಂಡವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು, ಈ ದೂರಿನ ಆದಾರದ ಮೆರೆಗೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜೆ.ಜೆ. ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ಡಿ.ಸಿ. ಮಂಜು ನೇತೃತ್ವದ ತಂಡ ಕಾರ್ಯಚರಣೆ ನಡೆಸಿ ಒಬ್ಬ ಅರೋಪಿಯನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ವಿಚಾರಣೆಗೊಳಪಡಿಸಿ ಆರೋಪಿಯು ನೀಡಿದ ಸುಳಿವಿನ ಮೇರೆಗೆ ತಲೆಮರೆಸಿಕೊಂಡಿದ್ದ ಇನ್ನೂ ಮೂರು ಜನ ಆರೋಪಿಗಳನ್ನು ಪತ್ತೆ ಹಚ್ಚಿ ವಿಚಾರಣೆಗೊಳಪಡಿಸಿದ್ದು, ಆರೋಪಿಗಳು ಜೆ.ಜೆ. ನಗರ, ವಿಜಯನಗರ, ಸಂಪಿಗೆ ಹಳ್ಳಿ, ಬಸವನಗುಡಿ, ಕೆಂಪೇಗೌಡ ನಗರ, ಚನ್ನಮ್ಮನಕೆರೆ ಅಚ್ಚುಕಟ್ಟು, ಸಿದ್ದಾಪುರ ಹಾಗೂ ಕುಂಬಳಗೋಡು ಪೊಲೀಸ್ ಠಾಣಾ ಸರಹದ್ದಿನಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ನೀಡಿದ ಮಾಹಿತಿ ಮೇರೆಗೆ ಒಟ್ಟು ಸುಮಾರು 9,80,000ರೂ ಬೆಲೆ ಬಾಳುವ 16 ದ್ವಿಚಕ್ರ ವಾಹನಗಳನ್ನು ಅಮಾನತ್ತು ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.