ದ್ವಿತೀಯ ಪಿಯುಸಿ ಫಲಿತಾಂಶ ಬಾಲಕಿಯರೇ ಮೇಲುಗೈ, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ. ಚಿತ್ರದುರ್ಗ ಕೊನೆ ಸ್ಥಾನ
ಆಗಸ್ಟ್‍ನಲ್ಲಿ ಪೂರಕ ಪರೀಕ್ಷೆ: ಜೂನ್ ತಿಂಗಳಾಂತ್ಯಕ್ಕೆ ಪೂರಕ ಪರೀಕ್ಷೆ ದಿನಾಂಕ ಪ್ರಕಟ.
ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಶೇ61.88ರಷ್ಟು ವಿದ್ಯಾರ್ಥಿಗಳು ಉತೀರ್ಣರಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಶನಿವಾರ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆಯ ಕಚೇರಿಯಲ್ಲಿ 2022ರ ಏಪ್ರಿಲ್/ಮೇ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಸಚಿವ ನಾಗೇಶ್ ಅವರು ಬಿಡುಗಡೆ ಮಾಡಿದರು.
ಕೋವಿಡ್ ಭೀತಿಯ ನಡುವೆಯು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಏಪ್ರಿಲ್ 22 ರಿಂದ ಮೇ 18 ರವರೆಗೂ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ 683563 ವಿದ್ಯಾರ್ಥಿಗಳು ಪರೀಕ್ಷೆ ಬೆರದಿದ್ದರು. 5,99,794 ಹೊಸ (ಪ್ರೆಶರ್ಸ್) ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ 4,022,697 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಪುನರಾವರ್ತಿತ 61,838 ವಿದ್ಯಾರ್ಥಿಗಳಲ್ಲಿ 14,403 ಮಂದಿ ಪಾಸಾಗಿದ್ದಾರೆ, ಇನ್ನ 21,931 ಖಾಸಗಿ ವಿದ್ಯಾರ್ಥಿಗಳಲ್ಲಿ 5,866 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ, ಕಲಾ ವಿಭಾಗದಲ್ಲಿ ಶೇ. 48.71ರಷ್ಟು ವಿದ್ಯಾರ್ಥಿಗಳು, ವಾಣಿಜ್ಯ ಶೇ. 64.97ರಷ್ಟು ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ. 72.53ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಹೆಚ್ಚು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಗ್ರಾಮಾಂತರ ಭಾಗದಲ್ಲಿ ಶೇಕಡಾ 62.18 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದರೆ, ನಗರ ಪ್ರದೇಶದಲ್ಲಿ ಶೇಕಡಾ 61.78 ವಿದ್ಯಾರ್ಥಿಗಳು ಪಾಸಾಗಿದ್ದಾರೆ.
ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ 88.08 ರಷ್ಟು ಫಲಿತಾಂಶವನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದೆ. ಎರಡನೇ ಸ್ಥಾನದಲ್ಲಿ ಉಡುಪಿ ಜಿಲ್ಲೆ 86.38 ರಷ್ಟು ಫಲಿತಾಂಶವನ್ನು ಪಡೆದಿದೆ. ಹಾಗೂ ಚಿತ್ರದುರ್ಗ ಜಿಲ್ಲೆ ಶೇ 49.31 ರಷ್ಟು ಫಲಿತಾಂಶವನ್ನು ಪಡೆದು ಕೊನೆಯ ಸ್ಥಾನದಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.
ಮಾಧ್ಯಮವಾರು ಫಲಿತಾಂಶ : ದ್ವಿತೀಯ ಪಿಯುಸಿ ಪರೀಕ್ಷೆಗೆ ಕನ್ನಡ ಮಾಧ್ಯಮದಲ್ಲಿ 2,98,102 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 1,53,164 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ51.38 ರಷ್ಟು ಫಲಿತಾಂಶವನ್ನು ಪಡೆದಿದ್ದಾರೆ. ಆಂಗ್ಲ ಮಾಧ್ಯಮದಲ್ಲಿ 3,85,461 ಮಂದಿ ಪರೀಕ್ಷೆ ಎದುರಿಸಿದ್ದು 2,69,802 ಮಂದಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ಶೇ 69.99 ರಷ್ಟು ಫಲಿತಾಂಶವನ್ನು ಪಡೆದಿದ್ದಾರೆ.
ವಿಷಯವಾರುದಲ್ಲಿ ನೂರಕ್ಕೆ ನೂರು ಅಂಕ ಪಡೆದ ಒಟ್ಟು ವಿದ್ಯಾರ್ಥಿಗಳು : ಗಣಿತ ವಿಷಯದಲ್ಲಿ 14210 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕ ಪಡೆದಿದ್ದಾರೆ. ಅಕೌಂಟೆನ್ಸಿ ವಿಷಯದಲ್ಲಿ 3460 ವಿದ್ಯಾರ್ಥಿಗಳು, ಕಂಪ್ಯೂಟರ್ ವಿಜ್ಞಾನದಲ್ಲಿ4868 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದಾರೆ.
ವಿವಿಧ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆ : ಉನ್ನತ ಶ್ರೇಣಿ ಶೇ 85 ಹಗೂ ಅದಕ್ಕಿಂತ ಹೆಚ್ಚು ಅಂಕವನ್ನು 91,106 ವಿದ್ಯಾರ್ಥಿಗಳು ಪಡೆದರೆ. ಪ್ರಥಮ ಶ್ರೇಣಿಯಲ್ಲಿ ಶೇಕಡ 85 ಕ್ಕಿಂತ ಕಡಿಮೆ 60 ಕ್ಕಿಂತ ಹೆಚ್ಚು 2,14,115 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ದ್ವಿತೀಯ ದರ್ಜೆಯಲ್ಲಿ 68,444 ಪಾಸಾಗಿದ್ದಾರೆ. ತೃತೀಯ ದರ್ಜೆಯಲ್ಲಿ 49,301 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಶೇಕಡ ನೂರರಷ್ಟು ಫಲಿತಾಂಶ ಪಡೆದ ಕಾಲೇಜುಗಳು : 4 ಸರ್ಕಾರಿ ಪದವಿ ಪೂರ್ವ ಕಾಲೇಜು, 2 ಅನುದಾನಿತ ಪದವಿ ಪೂರ್ವ ಕಾಲೇಜು, 50 ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳು ರಾಜ್ಯದಲ್ಲಿಯೇ ಶೇಕಡ ನೂರಕ್ಕೆ ನೂರರಷ್ಟು ಫಲಿತಾಂಶವನ್ನು ಪಡೆದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ 4 ಜನ ಮೊದಲ ರ್ಯಾಂಕ್ : ಬೆಂಗಳೂರಿನ ಬಿಜಿಎಸ್ ಪಿಯು ಕಾಲೇಜಿನ ನೀಲು ಸಿಂಗ್, ಸೆಂಟ್ ಕ್ಲಾರೆಂಟ್ ಪಿಯು ಕಾಲೇಜಿನ ಆಕಾಶ್ ದಾಸ್, ಚಿಕ್ಕಬಳ್ಳಾಪುರದ ಎಸ್.ಬಿ.ಜಿ.ಎನ್,ಎಸ್ ಕಾಲೇಜಿನ ನೇಹ ಬಿ.ಆರ್, ಹಾಗೂ ಬೆಂಗಳೂರಿನ ಜೈನ್ ಪಿಯು ಕಾಲೇಜಿನ ಮಾನವ ವಿನಯ್ ಕ್ರೇಜಿವಾಲ್ 596 ಅಂಕಗಳನ್ನು ಪಡೆಯುವ ಮೂಲಕ ರಾಜ್ಯದಲ್ಲಿಯೇ ವಾಣಿಜ್ಯ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಗಳಿಸಿದ್ದಾರೆ.
ವಿಜ್ಞಾನ ವಿಭಾಗದಲ್ಲಿ: ಬೆಂಗಳೂರಿನ ಆರ್.ವಿ ಪಿಯು ಕಾಲೇಜಿನ ಸಿಮ್ರಾನ್ ಶೇಷಾ ರಾವ್, ಇಲಂ ಮೊಹಮ್ಮದ್ ರಫೀಕ್, ಸಾಯಿ ಚಿರಾಗ್, ಶ್ರೀಕೃಷ್ಣ ಪೇಜತಾಯ 600ಕ್ಕೆ 598 ಅಂಕಗಳನ್ನು ಪಡೆದು ಪ್ರಥಮ ರ್ಯಾಂಕ್ ಗಳಿಸಿದ್ದಾರೆ.
ಕಲಾ ವಿಭಾಗದಲ್ಲಿ : ಬಳ್ಳಾರಿ ಹಿಂದು ಇಂಡಿಪೆಂಡೆಂಟ್ ಪಿಯು ಕಾಲೇಜಿನ ಶ್ವೇತಾ ಬೀಮಾ ಶಂಕರ್ ಮತ್ತು ಮಡಿವಾಳರ ಸಹನಾ 600ಕ್ಕೆ 594 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಕಲಾ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಪಡೆದಿದ್ದಾರೆ.
ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪ್ರತಿಯನ್ನು ಪಡೆಯಲು ಇಂದಿನಿಂದಲೇ ಅವಕಾಶ ಕಲ್ಪಿಸಲಾಗಿದೆ. ಅನುತ್ತೀರ್ಣ ವಿದ್ಯಾರ್ಥಿಗಳು ಮರುಮೌಲ್ಯಮಾಪನ ಫಲಿತಾಂಶಕ್ಕೆ ಕಾಯದೇ, ಪೂರಕ ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸುವುದು ಉತ್ತಮ’ ಎಂದು ಸಚಿವರು ಸಲಹೆ ನೀಡಿದರು.
ರಾಜ್ಯದಲ್ಲಿ ಕೋವಿಡ್ ಇದ್ದರೂ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು, ಈ ವರ್ಷ ಮಕ್ಕಳ ನಿರೀಕ್ಷೆಗಿಂತ ಚನ್ನಾಗಿ ಪರೀಕ್ಷೆ ಬರೆದಿದ್ದಾರೆ. ಯಾರು ಫಲಿತಾಂಶದಿಂದ ನಿರಾಸೆ ಆಗಬಾರದು, ಆಗಸ್ಟ್ 1ರಂದು ಪೂರಕ ಪರೀಕ್ಷೆ ಮಾಡಲಾಗುವುದು ಪರೀಕ್ಷಾ ವೇಳಾ ಪಟ್ಟಿಯನ್ನು ಶಿಘ್ರದಲ್ಲಿ ನೀಡುತ್ತೇವೆ. ಒಟ್ಟು 22 ಏಪ್ರಿಲ್ ಆರಂಭವಾಗಿದ್ದು ಮೇ 18 ಮುಗಿತಿತ್ತು, ಈ ವರ್ಷ ಕಡಿಮೆ ಅವಧಿಯಲ್ಲಿ ಫಲಿತಾಂಶ ನೀಡ್ತಿದ್ದೇವೆ. ವಿದ್ಯಾರ್ಥಿಗಳಿಗೆ ಕಠಿಣ ಪ್ರಶ್ನೆಗಳುನ್ನೂ ನೀಡಲಾಗಿತ್ತು, ಅದರಿಂದ ಅವರ ಭೌದ್ದಿಕ ಶಕ್ತಿ ಉತ್ತಮವಾಗಲಿದೆ. ಎಲ್ಲಾ ವಿಷಯಗಳಲ್ಲಿ ಕನಿಷ್ಠ ಅಂಕಗಳಿಗಿಂತ ಹೆಚ್ಚು ಅಂಕಗಳನ್ನು ಪಡೆದು ಯಾವುದಾದರು ಒಂದು ವಿಷಯದಲ್ಲಿ ಫೇಲಾಗಿದ್ದರೆ ಅಂತಹ ವಿಷಯಕ್ಕೆ ಗ್ರೇಸ್ ಅಂಕ ನೀಡಿ ಪಾಸ್ ಮಾಡಿದ್ದೇವೆ, ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್ ಮೂಲಕ ವಿದ್ಯಾರ್ಥಿಗಳಿಗೆ ಕಳಿಸಿದ್ದೇವೆ. ಜುಲೈ 18 ರೊಳಗೆ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ತಲುಪಿಸುತ್ತೇವೆ.
-ಬಿ.ಸಿ ನಾಗೇಶ್, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರು.
![](https://prajapragathi.com/wp-content/uploads/2022/06/WhatsApp-Image-2022-06-18-at-1.25.33-PM.jpeg)