ಚಳ್ಳಕೆರೆ
ನಗರಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗಿಂತ ಹೆಚ್ಚು ಸ್ಥಾನವನ್ನು ಗಳಿಸಲು ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ಜಿಲ್ಲಾ ಮುಖಂಡರ ಮಾರ್ಗದರ್ಶನದಲ್ಲಿ ಮತದಾರರನ್ನು ಭೇಟಿ ಮಾಡಿ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಲಾಗುವುದು. ಈಗಾಗಲೇ ನಗರದ ಬಹುತೇಕ ವಾರ್ಡ್‍ಗಳಲ್ಲಿ ಪ್ರಚಾರ ಕಾರ್ಯ ಅಂತಿಮ ಹಂತದಲ್ಲಿದ್ದು, ಮತದಾರರು ಮತದಾನ ಸಂದರ್ಭದಲ್ಲಿ ಬಿಜೆಪಿಯ ಸಾಧನೆಗಳನ್ನು ಅರಿತು ಮತ ನೀಡಬೇಕೆಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಜೆಎಂಸಿ ವೀರೇಶ್ ಮನವಿ ಮಾಡಿದ್ದಾರೆ.
ಅವರು, ಬುಧವಾರ ಪಕ್ಷದ ಹಲವಾರು ಮುಖಂಡ ಜೊತೆಯಲ್ಲಿ ವಾರ್ಡ್ ನಂ.10, 11, 12, 13ರ ವ್ಯಾಪ್ತಿಯಲ್ಲಿ ಚುನಾವಣಾ ಹಿನ್ನೆಲೆಯಲ್ಲಿ ಮನೆ ಮನೆಗೂ ಭೇಟಿ ನೀಡಿ ಮತದಾರರನ್ನು ಭೇಟಿ ಮಾಡಿ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಕಳೆದ ಅವಧಿಯಲ್ಲಿ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸದೇ ಇದ್ದರೂ ಸಹ ಜನರ ಮನ್ನಣೆಗೆ ಪಾತ್ರವಾಗಿತ್ತು. ಈ ಬಾರಿಗೂ ಸಹ ಗೆಲುವು ಸಾಧಿಸುವ ನಿಟ್ಟಿನಲ್ಲಿ ಬಿಜೆಪಿ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಪಕ್ಷದ ಹಿರಿಯ ಮುಖಂಡ ಡಿ.ಎಂ.ತಿಪ್ಪೇಸ್ವಾಮಿ ಮಾತನಾಡಿ, ನಗರಸಭೆ ಚುನಾವಣೆಗೆ ಸಂಬಂಧಪಟ್ಟಂತೆ ಬಹುತೇಕ ವಾರ್ಡ್‍ಗಳಲ್ಲಿ ಈಗಾಗಲೇ ಮತದಾರರನ್ನು ಭೇಟಿ ಮಾಡಿ ಮತದಾರರನ್ನು ಭೇಟಿ ಮಾಡಿ ಮತಯಾಚನೆ ಮಾಡಲಾಗಿದೆ. ನಗರದ ಅಭಿವೃದ್ಧಿಗೆ ಭಾರತೀಯ ಜನತಾ ಪಕ್ಷ ಪ್ರಥಮ ಪ್ರಾಶಸ್ತ್ಯವನ್ನು ನೀಡುತ್ತಾ ಬಂದಿದೆ. ರಾಜ್ಯದ ಬಹುತೇಕ ಮುಂದುವರೆದ ನಗರಸಭೆಗಳು ಭಾರತೀಯ ಜನತಾ ಪಕ್ಷದ ಆಡಳಿತವನ್ನು ಹೊಂದಿವೆ. ನಗರದ ಜನತೆ ಬಿಜೆಪಿಗೆ ಮತ ನೀಡುವಂತೆ ಅವರು ವಿನಂತಿಸಿದ್ದಾರೆ.
ಪ್ರಚಾರ ಕಾರ್ಯದಲ್ಲಿ ಪಕ್ಷದ ಮುಖಂಡರಾದ ಎ.ವಿಜಯೇಂದ್ರ, ಮಾತೃಶ್ರೀ ಎನ್.ಮಂಜುನಾಥ, ಡಿಶ್ ವೆಂಕಟೇಶ್ ಅಭ್ಯರ್ಥಿಗಳಾದ ಕೆ.ವೀರಭದ್ರಪ್ಪ, ಕುಮಾರ್ ಮುಂತಾದವರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
