ನಾಲ್ಕೈದು ದಿನಗಳಲ್ಲಿ ತೀರ್ಮಾನ ಮಾಡುತ್ತೇನೆ…!

ಬೆಂಗಳೂರು:

     ಪಕ್ಷದಲ್ಲಿ ಮುಂದುವರಿಯ ಬೇಕೇ ಬೇಡವೇ ಎಂಬ ಬಗ್ಗೆ ಇನ್ನೂ ನಾಲ್ಕೈದು ದಿನಗಳಲ್ಲಿ ತೀರ್ಮಾನ ಮಾಡುತ್ತೇನೆ ಎಂದು  ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

    ಮಂಗಳವಾರ ಮಾತನಾಡಿದ ಅವರು, ನಾನು ಬಿಜೆಪಿಯಲ್ಲೇ ಇದ್ದೇನೆ. ಅನಿವಾರ್ಯವಾಗಿ ಹೊಂದಿಕೊಂಡು ಹೋಗುತ್ತಿದ್ದೇನೆ. ಇಲ್ಲಿನ ಸಮಸ್ಯೆ ಕುರಿತು ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲೇ ಪಕ್ಷದ ನಾಯಕರ ಗಮನಕ್ಕೆ ತಂದಿದ್ದೆ. ಆದರೆ, ಏನೂ ಪ್ರಯೋಜನ ಆಗಲಿಲ್ಲ ಎಂದರು.

    ಅನಿವಾರ್ಯವಾಗಿ ನಾನೇ ಕಾಂಗ್ರೆಸ್‌ ನಾಯಕರನ್ನು ಭೇಟಿ ಮಾಡಿದ್ದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನಕ್ಕೆ ಮನವಿ ಮಾಡಿದ್ದೆ. ಅವರು ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link