ನಾಳೆ ಕಾಯಕಯೋಗಿ ಶ್ರೀ ಕುಳುವ ನುಲಿಯ ಚಂದಯ್ಯ ಜಯಂತಿ : ಸಿಎಂ ಸಿದ್ದರಾಮಯ್ಯ ಉದ್ಘಾಟನೆ

ಬೆಂಗಳೂರು

     ರಾಜ್ಯ ಮಟ್ಟದ ಶರಣ ಶ್ರೀ ಕುಳುವ ನುಲಿಯ ಚಂದಯ್ಯನವರ 916ನೇ ಜಯಂತಿಯನ್ನು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಉದ್ಘಾಟಿಸಲಿದ್ದಾರೆ. ಈ ಮಹತ್ವದ ಮತ್ತು ಐತಿಹಾಸಿಕ ಕಾರ್ಯಕ್ರಮದಲ್ಲಿ ಕುಳುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಅಖಿಲ ಕರ್ನಾಟಕ ಕುಳುವ ಮಹಾಸಂಘ ಮನವಿ ಮಾಡಿದೆ.

     ಈ ಕುರಿತು ಹೇಳಿಕೆ ನೀಡಿರುವ ಸಂಘದ ಗೌರವಾಧ್ಯಕ್ಷ ಮತ್ತು ಮಾಜಿ ಶಾಸಕ ಜಿ.ಚಂದ್ರಣ್ಣ, ಸಂಘದ ರಾಜ್ಯಾಧ್ಯಕ್ಷ ಶಿವಾನಂದ ಎಂ. ಭಜಂತಿ ಮತ್ತು ಪ್ರಧಾನ ಕಾರ್ಯದರ್ಶಿ ಆನಂದ್ ಕುಮಾರ್ ಏಕಲವ್ಯ, ಪ್ರಮುಖ ಶರಣರಲ್ಲಿ ನುಲಿಯ ಚಂದಯ್ಯ ತನ್ನ ಕಾಯಕ ಮತ್ತು ದಾಸೋಹದ ಮೂಲಕ ಪ್ರಸಿದ್ಧರಾಗಿದ್ದು, ಬಸವಾದಿ ಶರಣರಲ್ಲಿ, ಕಾಯಕ ಸಿದ್ಧಾಂತಕ್ಕೆ ಅಕ್ಷರಶಃ ಮಹತ್ವ ನೀಡಿ ಆದರೆ ಮೌಲ್ಯ ಹೆಚ್ಚಿಸಿದ್ದಾರೆ. ಅವರ ಜಯಂತಿ ಆಚರಿಸುವ ಮೂಲಕ ಬಹು ದಿನಗಳ ಬೇಡಿಕೆಗೆ ಸರ್ಕಾರ ಗೌರವ ನೀಡುತ್ತಿದೆ ಎಂದು ಹೇಳಿದ್ದಾರೆ.

    ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮುಖ್ಯಮಂತ್ರಿ ಅವರ ಜೊತೆಗೆ ವಿಶೇಷ ಅಥಿತಿಯಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್. ತಂಗಡಗಿ ಪಾಲ್ಗೊಳ್ಳುತ್ತಿದ್ದಾರೆ. ಸಾಣೆಹಳ್ಳಿಯ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯಾದ್ಯಾಂತ ಜಿಲ್ಲಾ, ತಾಲ್ಲೂಕು ಆಡಳಿತದ ಜೊತೆಗೂಡಿ ಅರ್ಥಪೂರ್ಣವಾಗಿ ಆಚರಣೆ ಮಾಡುವಂತೆ ಕೋರಿದ್ದಾರೆ.

    12ನೇ ಶತಮಾನದ ಕಲ್ಯಾಣದ ವೈಚಾರಿಕ ಕಾಂತ್ರಿಯ ಹರಿಕಾರರಾದ ಬಸವಸಾಧಿ ಪ್ರಮಥರ ಸಮಾಕಾಲೀನರು, ಕಲ್ಯಾಣದ ಸ್ವತಃ ಕಾಯಕ ಮತ್ತು ದಾಸೋಹಕ್ಕೆ ಮಾದರಿಯಾದ ಶ್ರೇಷ್ಠ ಕಾಯಕ ಹಠಯೋಗಿ, ಕೊರಮ-ಕೊರಚ ಸಮುದಾಯದ ಶರಣ ಶ್ರೀ ಕುಳುವ ನುಲಿಯಚಂದಯ್ಯ ಜಯಂತೋತ್ಸವವನ್ನು ಪ್ರತಿ ವರ್ಷ ನೂಲ ಹುಣ್ಣಿಮೆ ದಿನ ಆಚರಿಸಲು ಎ.ಕೆ.ಎಂ.ಎಸ್ ಸಂಘದ ಮನವಿಗೆ ಸ್ಪಂದಿಸಿ ಸರ್ಕಾರ ಕಳೆದ ವರ್ಷ ಆದೇಶ ಹೊರಡಿಸಿತ್ತು.

    ಶರಣರ ಕಾಯಕ ತತ್ವಾದರ್ಶಗಳ ಬಗ್ಗೆ ಇಂದಿನ ಯುವ ಪೀಳಿಗೆಗೆ ತಿಳಿಸುವ ಜೊತೆಗೆ ಸಮುದಾಯದ ಒಗ್ಗಟ್ಟು ಮತ್ತು ಧಾರ್ಮಿಕ ಅಸ್ಮಿತೆಯ ಬದ್ದತೆಯನ್ನು ಎತ್ತಿಹಿಡಿಯಬೇಕು.

    ಈ ಕಾರ್ಯಕ್ರಮದ ಮೂಲಕ ಸಮಾಜವನ್ನು ಮುಖ್ಯ ವಾಹಿನಿಗೆ ತರಲು ಎಲ್ಲರೂ ಸಹಕಾರಿಯಾಗಬೇಕೆಂದು ಶ್ರೀ ಕುಳುವ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮ ಆಚರಣೆಯ ಸಂಚಾಲಕರಾದ ಪಲ್ಲವಿ ಜಿ, ರಾಷ್ಟ್ರೀಯ ಕಾರ್ಯದರ್ಶಿ ಆದರ್ಶ್ ಯಲ್ಲಪ್ಪ, ಪ್ರಧಾನ ಸಂಚಾಲಕ ಎಂ. ವೆಂಕಟೇಶ್ ಕೋರಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap