ಚಿತ್ರದುರ್ಗ:
ನಿವೃತ್ತ ಕೆ.ಎ.ಎಸ್.ಅಧಿಕಾರಿ ಚಳ್ಳಕೆರೆ ಮೂಲದ ಜೈರಾಂರವರು ಪ್ರಧಾನಿ ನರೇಂದ್ರಮೋದಿರವರ ಆದರ್ಶ ಹಾಗೂ ಬಿಜೆಪಿ.ಯ ತತ್ವ ಸಿದ್ದಾಂತಗಳನ್ನು ಮೆಚ್ಚಿ ಭಾನುವಾರ ಬಿಜೆಪಿ. ಪಕ್ಷಕ್ಕೆ ಸೇರ್ಪಡೆಯಾದರು.
ಬಿಜೆಪಿ.ಜಿಲ್ಲಾಧ್ಯಕ್ಷ ಕೆ.ಎಸ್.ನವೀನ್ ಪಕ್ಷದ ಕಚೇರಿಯಲ್ಲಿ ಜೈರಾಂರವರಿಗೆ ಬಿಜೆಪಿ.ಭಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.
ಜೈರಾಂರವರನ್ನು ಪಕ್ಷಕ್ಕೆ ಸೇರಿಸಿಕೊಂಡು ನಂತರ ಮಾತನಾಡಿದ ಬಿಜೆಪಿ.ಜಿಲ್ಲಾಧ್ಯಕ್ಷ ಕೆ.ಎಸ್.ನವೀನ್ ಬಿಜೆಪಿ.ಪಕ್ಷದ ತತ್ವ ಸಿದ್ದಾಂತ ಹಾಗೂ ದೇಶದ ಪ್ರಧಾನಿ ನರೇಂದ್ರಮೋದಿರವರ ಪಾರದರ್ಶಕ ಆಡಳಿತವನ್ನು ಮೆಚ್ಚಿಕೊಂಡು ಜೈರಾಂ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಚಳ್ಳಕೆರೆಯಲ್ಲಿ ಉಪನ್ಯಾಸಕರಾಗಿ ವೃತ್ತಿಯನ್ನು ಆರಂಭಿಸಿದ ಇವರು ನಿವೃತ್ತಿಯ ನಂತರ ರಾಜಕೀಯ ಸೇರಬೇಕೆಂದು ಇಚ್ಚಿಸಿ ಕಳೆದ ಕೆಲವು ದಿನಗಳ ಹಿಂದೆ ನನ್ನನ್ನು ಸಂಪರ್ಕಿಸಿದ್ದರು. ಅದರಂತೆ ಈಗ ಪಕ್ಷಕ್ಕೆ ಸೇರಿರುವುದು ನನಗೆ ಸಂತಸವಾಗಿದೆ. ಲೋಸಕಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಪಕ್ಷ ಸಂಘಟನೆಗೆ ಶ್ರಮಿಸುವಂತೆ ಹಾರೈಸಿದರು.
ಬಿಜೆಪಿ.ಗೆ ಸೇರ್ಪಡೆಯಾಗಿ ಮಾತನಾಡಿದ ಜೈರಾಂ ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರಗಾಮಿಗಳು ನಮ್ಮ ದೇಶದ 44 ಯೋಧರನ್ನು ಹತ್ಯೆಗೈದ ಸಂದರ್ಭದಲ್ಲಿ ದೇಶ ರಕ್ಷಣೆಗಾಗಿ ಪ್ರಧಾನಿ ಮೋದಿರವರು ಕೈಗೊಂಡ ದಿಟ್ಟ ನಿರ್ಧಾರ ನನಗೆ ತುಂಬಾ ಇಷ್ಟವಾಯಿತು. ಅದರಂತೆ ಅವರ ಆದರ್ಶ. ಬಿಜೆಪಿ.ಯ ತತ್ವ ಸಿದ್ದಾಂತವನ್ನು ಮೆಚ್ಚಿಕೊಂಡು ಬಿಜೆಪಿ.ಗೆ ಸೇರಿದ್ದೇನೆ. ದೇಶ ಕಾಯಕ ಯೋಧರನ್ನು ಕಾಯಲು ಹೊರಟಿರುವ ಪ್ರಧಾನಿ ಮೋದಿ ದೇಶಕ್ಕೆ ಸರ್ವಶ್ರೇಷ್ಟ ನಾಯಕ. ಮೋದಿರವರು ದೇಶಕ್ಕೆ ಮತ್ತೊಮ್ಮೆ ಪ್ರಧಾನಿಯಾಗಬೇಕಿದೆ. ಅದಕ್ಕಾಗಿ ಪಕ್ಷವನ್ನು ಬಲಪಡಿಸುವಲ್ಲಿ ಶಕ್ತಿ ಮೀರಿ ಶ್ರಮಿಸುವುದಾಗಿ ಭರವಸೆ ನೀಡಿದರು.
ವಿಭಾಗೀಯ ಸಹ ಪ್ರಭಾರಿ ಜಿ.ಎಂ.ಸುರೇಶ್, ಡಾ.ಎ.ಹೆಚ್.ಶಿವಯೋಗಿಸ್ವಾಮಿ, ಟಿ.ಜಿ.ನರೇಂದ್ರನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರತ್ನಮ್ಮ, ಶಿವಪುತ್ರಪ್ಪ, ನಾಗರಾಜ್‍ಬೇದ್ರೆ, ದಗ್ಗೆಶಿವಪ್ರಕಾಶ್ ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.ಜೈರಾಂರವರ ನೂರಾರು ಬೆಂಬಲಿಗರು ಹಾಗೂ ಅಭಿಮಾನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
