ಗುಬ್ಬಿ
ನಿವೃತ್ತ ನೌಕರರಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಿಧ ಸ್ಫರ್ಧೆಗಳನ್ನು ನಡೆಸಿದ ಇನ್ನರ್ ವ್ಹೀಲ್ ಕ್ಲಬ್ ವಿಜೇತರಾದವರಿಗೆ ಬಹುಮಾನಗಳನ್ನು ನೀಡುವ ಮೂಲಕ ಅಭಿನಂದನೆ ಸಲ್ಲಿಸಿದರು.
ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಶುಭಾಸಾಗರ್ ಮಾತನಾಡಿ, ಕ್ಲಬ್ ವತಿಯಿಂದ ವಿವಿಧ ಸಮಾಜ ಸೇವಾ ಕಾರ್ಯಗಳ ಜೊತೆಗೆ ಶೈಕ್ಷಣಿಕ ಪ್ರಗತಿಗೆ ಪೂರಕವಾದ ಮತ್ತು ಪರಿಸರಕ್ಕೆ ಪೂರಕವಾದ ಸೇವಾ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದು, ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಿವೃತ್ತ ನೌಕರರಿಗೆ ಕೇರಂ, ಚೆಸ್, ದೇಶಭಕ್ತಿ ಗೀತೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ನಡೆಸಿ ವಿಜೇತರಾದವರಿಗೆ ಕ್ಲಬ್ ವತಿಯಿಂದ ಬಹುಮಾನಗಳನ್ನು ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಂ.ರಾಮಯ್ಯ, ಕಾರ್ಯದರ್ಶಿ ರೇಣುಕಾ ಪ್ರಸಾದ್, ವೆಂಕಟೇಶಯ್ಯ, ಇನ್ನರ್ ವ್ಹೀಲ್ ಕ್ಲಬ್ ಕಾರ್ಯದರ್ಶಿ ಯಶೋಧ, ಖಜಾಂಚಿ ಹಂಸ, ಲತಾಪ್ರಕಾಶ್, ಶ್ವೇತ, ಸುನೀತಾ ಸೇರಿದಂತೆ ಕ್ಲಬ್‍ನ ಪದಾಧಿಕಾರಿಗಳು ಮತ್ತು ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.
