ನಿಷ್ಪಕ್ಷಪಾತವಾದ ತನಿಖೆ ಮೂಲಕ ಇಡೀ ವ್ಯವಸ್ಥೆ ಸ್ವಚ್ಛಗೊಳಿಸಲು ಬದ್ಧ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ನಿಷ್ಪಕ್ಷಪಾತವಾದ ಹಾಗೂ ನಿರ್ದಾಕ್ಷಿಣ್ಯವಾದ ತನಿಖೆಯನ್ನು ಮಾಡುವ ಮೂಲಕ ಇಡೀ ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಬ್ಬನ್ ಪಾರ್ಕ್‍ನ ಸರ್ಕಾರಿ ಮತ್ಸ್ಯಾಲಯದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಪಿಎಸ್ ಐ ನೇಮಕಾತಿ ಹಗರಣದ ತನಿಖೆ ನಡೆಸಲು ಸಿಐಡಿಯವರಿಗೆ ಮುಕ್ತವಾದ ಅವಕಾಶವನ್ನು ನೀಡಲಾಗಿದೆ. ಸಾಕ್ಷ್ಯ ಆಧಾರಗಳ ಮೇಲೆ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಎಷ್ಟೇ ದೊಡ್ಡ ಅಧಿಕಾರಿಗಳಾಗಿದ್ದರೂ ನಮ್ಮ ಸರ್ಕಾರ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತದೆ.. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಹಗರಣದ ಕೂಗು ಕೇಳಿಬಂದಿದ್ದರೂ , ಯಾವುದೇ ತನಿಖೆ ನಡೆದಿರಲಿಲ್ಲ ಎಂದು ತಿಳಿಸಿದರು.

Recent Articles

spot_img

Related Stories

Share via
Copy link