ನೂತನಸಂಸತ್ ಭವನ ಉದ್ಘಾಟನೆ : ರಾಷ್ಟ್ರಪತಿಗೆ ಅವಮಾನ ಮಾಡಲಾಗಿದೆ : ಆಪ್‌ ಆರೋಪ

ನವದೆಹಲಿ

      ಇದೇ ಮೇ 28ರಂದು ಭಾನುವಾರ ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ. ಈ ಸಂಬಂಧ ನಡೆಯಲಿರುವ ಕಾರ್ಯಕ್ರಮಕ್ಕೆ ಎರಡು ಸದನಗಳ ಸಭಾಪತಿಗಳಿಗೆ, ಸದಸ್ಯರಿಗೆ ಆಮಂತ್ರಣ ನೀಡಲಾಗಿದೆ. ಆದರೆ ಮೊದಲ ಬುಡಕಟ್ಟು ಜನಾಂಗದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಮಂತ್ರಣ ನೀಡಿಲ್ಲ ಎಂದಿರುವ ಆಮ್‌ ಆದ್ಮಿ ಪಕ್ಷವು ಕಾರ್ಯಕ್ರಮ ಬಹಿಷ್ಕರಿಸುವುದಾಗಿ ತಿಳಿಸಿದೆ. ಸಂಸತ್ ಭವನದ ಉದ್ಘಾಟನೆ, ದಿನಾಂಕ, ಕಾರ್ಯಕ್ರಮ ಆಹ್ವಾನಿಸಿದವರ ಪಟ್ಟಿ, ಕೇಂದ್ರ ಸರ್ಕಾರದ ನಡೆ ಕುರಿತು ಕಾಂಗ್ರೆಸ್ ಸೇರಿದಂತೆ ವಿವಿಧ ವಿಪಕ್ಷಗಳಿಂದ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ.

     ಈ ಕುರಿತು ಎಎಪಿ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ. ದೇಶದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಸತ್ ಭವನದ ಉದ್ಘಾಟನೆಗೆ ಆಹ್ವಾನಿಸದೇ ಅವರಿಗೆ ಕೇಂದ್ರ ಸರ್ಕಾರ ಅಪಮಾನ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ. ಇದು ಅವರೊಬ್ಬರಿಗೆ ಮಾಡಿದ ಅಪಮಾನವಲ್ಲ ದಲಿತ, ಬುಡಕಟ್ಟು ಮತ್ತು ಸಮಾಜದ ಮೂಲ ವರ್ಗಕ್ಕೆ ಮಾಡಿದ ಅವಮಾನವಾಗಿದೆ. ರಾಷ್ಟ್ರಪತಿ ಉದ್ಘಾಟಿಸದ ಪ್ರಧಾನಿ ಮೋದಿ ಪಾಲ್ಗೊಳ್ಳುವ ಈ ಸಮಾರಂಭವನ್ನು ಬಹಿಷ್ಕರಿಸಿ ಎಂದು ಹೇಳಿದೆ. 

    ಇದಕ್ಕೂ ಮುನ್ನ ತೃಣಮೂಲ ಕಾಂಗ್ರೆಸ್ ಉದ್ಘಾಟನೆ ಸಮಾರಂಭ ಬಹಿಷ್ಕರಿಸುವುದಾಗಿ ಘೋಷಿಸಿತ್ತು. ಕಾಂಗ್ರೆಸ್ ಸಹ ಈ ಬಗ್ಗೆ ಗುರುವಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ತೃಣಮೂಲ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ಡೆರೆಕ್ ಒ’ಬ್ರೇನ್ ಅವರು, ಸಂಸತ್ ಭವನ ಎಂಬುದು ಕೇವಲ ಹೊಸ ಕಟ್ಟಡವಲ್ಲ. ಹಳೆಯ ಸಂಪ್ರದಾಯ, ಮೌಲ್ಯಗಳು, ಪೂರ್ವನಿದರ್ಶನಗಳು ಹಾಗೂ ಮಹತ್ವದ ನಿಯಮಗಳನ್ನು ಒಳಗೊಂಡ ಕೇಂದ್ರವಾಗಿದೆ.

      ಇದು ದೇಶದ ರತೀಯಪ್ರಜಾಪ್ರಭುತ್ವದ ಅಡಿಪಾಯವಾಗಿದೆ ಎಂದು ಹೇಳಿದ್ದಾರೆ. ನೂತನ ಸಂಸತ್ ಭವನದ ಉದ್ಘಾಟನೆ ಬಹಿಷ್ಕರಿಸಲು ಮುಂದಾದ ವಿಪಕ್ಷಗಳು ಮೇ 28ರ ಬದಲಿಗೆ ಆಗಸ್ಟ್ 15ಕ್ಕೆ ಭವನ ಉದ್ಘಾಟಿಸಿ ನೂತನ ಸಂಸತ್ ಭವನದ ಉದ್ಘಾಟನೆಯ ದಿನಾಂಕದ ಆಯ್ಕೆಗೂ ಆಕ್ಷೇಪಗಳು ಕೇಳಿ ಬಂದಿವೆ. ನೂತನ ಸಂಸತ್ ಭವನದ ಉದ್ಘಾಟನೆಯನ್ನು ಇದೇ ಮೇ 28ರಂದು ಉದ್ಘಾಟಿಸಲು ಬಿಜೆಪಿ ಯೋಜಿಸಿದೆ. ಆದಿನ ಆರ್‌ಎಸ್‌ಎಸ್ ಮಠಾಧೀಶ ವಿಡಿ ಸಾವರ್ಕರ್ ಜನ್ಮದಿನ ಎಂದು ದೂರಲಾಗಿದ್ದು, ಉದ್ಘಾಟನೆಯನ್ನು ಆಗಸ್ಟ್ 15 ರಂದು ಆಯೋಜಿಸಲು ಒತ್ತಾಯಿಸಿದ್ದಾರೆ ಎನ್ನಲಾಗಿದೆ.

     ಈ ಬಗ್ಗೆ ಗುರುವಾರ ನಿರ್ಧಾರ ಕೈಗೊಳ್ಳಲಿದೆ ಎಂದು ಪಕ್ಷದ ಮೂಲಗಳು ತಿಳಿಸಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಅವರು ಸಹ ಕೇಂದ್ರದ ವಿರುದ್ಧ ಖಾರವಾಗಿ ಪ್ರತಿಕ್ರಿಯಸಿದ್ದಾರೆ. 1975ರ ಆಗಸ್ಟ್‌ನಲ್ಲಿ ಅಂದಿನ ಪ್ರಧಾನಿ ಇಂದಿರಾಗಾಂಧಿ ಅವರು ಸಂಸತ್ತಿನ ಅನೆಕ್ಸ್ ಕಟ್ಟಡ ಉದ್ಘಾಟಿಸಿದ್ದರು. ನಂತರ 1987ರಲ್ಲಿ ಪ್ರಧಾನಿ ರಾಜೀವ್ ಗಾಂಧಿ ಅವರು ಸಂಸತ್ತಿನ ಗ್ರಂಥಾಲಯವನ್ನು ಉದ್ಘಾಟಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಬದಲಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೊಸ ಸಂಸತ್ ಭವನವನ್ನು ಉದ್ಘಾಟಿಸಬೇಕು ಎಂದು ಕಾಂಗ್ರೆಸ್ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap