ಪಣಂಬೂರು : ತೇಲುವ ಸೇತವೆ ಅನಾವರಣ…!

ಮಂಗಳೂರು:

     ಇಲ್ಲಿನ ಪಣಂಬೂರು ಕಡಲತೀರದಲ್ಲಿ ನೂತನವಾಗಿ ನಿರ್ಮಿಸಲಾದ ತೇಲುವ ಸೇತುವೆಯನ್ನು ರಾಜ್ಯ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಉದ್ಘಾಟಿಸಿದರು.ಇತ್ತೀಚಿನ ವರ್ಷಗಳಲ್ಲಿ ಈ ಕಡಲತೀರಕ್ಕೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ಈ ತೇಲುವ ಸೇತುವೆಯು ಇದೀಗ ಹೊಸ ಆಕರ್ಷಣೆಯಾಗಿದೆ.

    ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದು ಮೊದಲ ತೇಲುವ ಸೇತುವೆಯಾಗಿದ್ದು, ಉಡುಪಿಯ ಮಲ್ಪೆ ಕಡಲತೀರದಲ್ಲಿ ಇದಕ್ಕೂ ಮೊದು ತೇಲುವ ಸೇತುವೆಯನ್ನು ನಿರ್ಮಿಸಲಾಗಿದೆ.ಕದಳಿ ಬೀಚ್ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ, ಭಂಡಾರಿ ಬಿಲ್ಡರ್ಸ್ ಘಟಕವು 125 ಮೀಟರ್ ಉದ್ದದ ಸೇತುವೆಯನ್ನು ನಿರ್ಮಿಸಿದ್ದು, ಬುಧವಾರ ಉದ್ಘಾಟನೆಗೊಂಡಿದೆ.

    ಪ್ರವಾಸಿಗರ ಸುರಕ್ಷತೆಗಾಗಿ ಒಟ್ಟು 12 ಜೀವ ರಕ್ಷಕರು ಮತ್ತು ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ತೇಲುವ ಸೇತುವೆಯಲ್ಲಿ ನಿಂತು ಗರಿಷ್ಠ 50 ಜನರು ಸೂರ್ಯಾಸ್ತವನ್ನು ವೀಕ್ಷಿಸಬಹುದು.

    ಉದ್ಘಾಟನೆ ಬಳಿಕ ಮಾತನಾಡಿದ ಖಾದರ್, ಬೀಚ್ ಟೂರಿಸಂ ಅಭಿವೃದ್ಧಿಗೆ ಆದ್ಯತೆ ನೀಡಲು ಪ್ರವಾಸೋದ್ಯಮ ಸಚಿವ ಎಚ್‌ಕೆ ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಹೇಳಿದರು.ಬೀಚ್ ಅಭಿವೃದ್ಧಿ ಸಮಿತಿಯ ಸದಸ್ಯರಾದ ಲಕ್ಷ್ಮೀಶ ಭಂಡಾರಿ, ರಾಜೇಶ ಹುಕ್ಕೇರಿ ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap