ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗದಂತೆ ಕ್ರಮಕ್ಕೆ ಒತ್ತಾಯಿಸಿ ಸಿಎಂಗೆ ಪತ್ರ

ಬೆಂಗಳೂರು:

ಕೆಎಎಸ್ ಮರು ಪರೀಕ್ಷೆಗೆ ಘನ ನ್ಯಾಯಾಲಯ 32 ಅಭ್ಯರ್ಥಿಗಳಿಗೆ ಹಾಜರಾಗಲು ಅವಕಾಶ ಕಲ್ಪಿಸಿದೆ ಹಾಗೆಯೇ ಉಳಿದ ಅಭ್ಯರ್ಥಿಗಳಿಗೂ ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆವರಿಗೆ ಪತ್ರ ಬರದಿದ್ದಾರೆ.ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೆಎಎಸ್ ಪೂರ್ವಬಾವಿ ಪರೀಕ್ಷೆಯಲ್ಲಿನ ಮರು ಪರೀಕ್ಷೆಯ 2 ಪತ್ರಿಕೆಗಳಲ್ಲಿ 79 ದೋಷಗಳಿದ್ದರೂ ಕೆಪಿಎಸ್ ಸಿ ಕೇವಲ 5 ಪ್ರಶ್ನೆಗಳಿಗೆ ಮಾತ್ರ ಕೃಪಾಂಕ ನೀಡುವ ಮೂಲಕ ಕನ್ನಡ ಮಾಧ್ಯಮದ ಪರೀಕ್ಷಾರ್ಥಿಗಳಿಗೆ ಅನ್ಯಾಯಮಾಡಿದೆ, ಕೆಪಿಎಸ್ ಸಿಯ ನಿರಂತರ ಯಡವಟ್ಟುಗಳನ್ನು ಸಹಿಸದೇ ಪರೀಕ್ಷಾರ್ಥಿಗಳು ನ್ಯಾಯಾಲಯದ ಮೊರೆ ಹೋಗಿದ್ದರು.

ಈ ಹಿಂದೆ ಮುಖ್ಯಮಂತ್ರಿಗಳು ಸದನದಲ್ಲಿ ಹೇಳಿದ್ದಂತೆ ನ್ಯಾಯಾಲಯದ ತೀರ್ಪು ಬಂದಕೂಡಲೇ ಪರೀಕ್ಷಾರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸುವುದಾಗಿ ತಿಳಿಸಿದ್ದರು. ಸದ್ಯ ಘನ ನ್ಯಾಯಾಲಯ 32 ಅಭ್ಯರ್ಥಿಗಳಿಗೆ ಮರು ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಿದೆ. ಆದರೆ ಉಳಿದ ಅಭ್ಯರ್ಥಿಗಳ ಭವಿಷ್ಯದ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತಿಸಿ ಎಲ್ಲಾ ಅಭ್ಯರ್ಥಿಗಳಿಗೂ ಮರು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವುದು ನ್ಯಾಯೋಜಿತ ಕ್ರಮವಾಗಿರುತ್ತದೆ, ಈ ಕುರಿತು ಮುಖ್ಯಮಂತ್ರಿಗಳು ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪತ್ರ ಬರೆದಿದ್ದಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Recent Articles

spot_img

Related Stories

Share via
Copy link