ಪೊಲೀಸರ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ನೀಡಿದ ಜೆಡಿಎಸ್..!

ಬೆಂಗಳೂರು

    ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಜೆಡಿಎಸ್ ಮುಖಂಡರುಗಳು ದೂರು ಸಲ್ಲಿಸಿದ್ದಾರೆ

    ಬಸವೇಶ್ವರ ನಗರ ಪೊಲೀಸ್ ಠಾಣಾಧಿಕಾರಿಗಳು ಉದ್ದೇಶಪೂರ್ವಕವಾಗಿ ಜೆಡಿಎಸ್ ಪಕ್ಷದ ಕಾರ್ಯಕರ್ತರನ್ನು ಮನೆಗೆ ಕರೆತಂದು ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ನಡೆಸದಂತೆ ಒತ್ತಡ ಹೇರುತ್ತಿರುವದಲ್ಲದೆ, ಅವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಜೆಡಿಎಸ್ ಬೆಂಗಳೂರು ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಸುದ್ದಿಗೋಷ್ಟಿಯಲ್ಲಿ ದೂರಿದರು.

    ಪೊಲೀಸರ ವಿರುದ್ಧ ಚುನಾವಣಾಧಿಕಾರಿಗಳಿಗೆ ದೂರು ನೀಡಲಾಗಿದೆ ಸಂಬಂಧಪಟ್ಟ ಪೊಲೀಸರ ವಿರುದ್ಧ ಕಾನೂನು ಕ್ರಮ ಜರುಗಿಸಿ ಅಮಾನತುಗೊಳಿಸಬೇಕೆಂದು ಒತ್ತಾಯ ಮಾಡಿದರು.ಬಸವೇಶ್ವರ ನಗರ ಪೊಲೀಸ್ ಠಾಣೆಯ ಅಧಿಕಾರಿ ಸೋಮಶೇಖರ್ ಎಂಬಾತ ಏಕಪಕ್ಷೀಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಜೆಡಿಎಸ್ ಪಕ್ಷದ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡುತ್ತಿದ್ದಾರೆ. ಹತ್ತು ಹಲವು ಕಾರ್ಯಕರ್ತರನ್ನು ಜೆಡಿಎಸ್ ಪರ ಪ್ರಚಾರ ನಡೆಸದಂತೆ ಎಚ್ಚರಿಕೆ ನೀಡಿರುವ ಅವರು, ಸುಳ್ಳು ಕೇಸುಗಳನ್ನು ದಾಖಲಿಸಲಾಗುವುದು ಎಂದು ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿದರು.

    ನಾವು 15 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿತ್ತಿದ್ದು,ಇಬ್ಬರು ವಾಪಸ್ ಪಡೆದರು.ಆದರೆ,ಪಕ್ಷೇತರ ಅಭ್ಯರ್ಥಿ ಒಬ್ಬರಿಗೆ ಬೆಂಬಲ ನೀಡಿದ್ದೇವೆ.30ನೇ ತಾರೀಖು ಮಾಜಿ ಸಿಎಂ ಕುಮಾರಸ್ವಾಮಿ ಪ್ರಚಾರ ಮಾಡಲಿದ್ದಾರೆ ಎಂದ ಅವರು, ಅವರಿಗೆ ಜಯದ ಬಗ್ಗೆ ಖಾತ್ರಿ ಇಲ್ಲ, ಹಾಗಾಗಿ, ಅನರ್ಹ ಶಾಸಕರು ಹಣದ ಹೊಳೆ ಹರಿಸುತ್ತಿದ್ದಾರೆ. ಅವರಿಗೆ ಜಯದ ಬಗ್ಗೆ ಖಾತ್ರಿ ಇಲ್ಲದ ಕಾರಣ ಹಣದ ಹೊಳೆ ಹರಿಸುತ್ತಿದ್ದಾರೆ ಎಂದರು.

    ಚುನಾವಣಾ ಆಯೋಗ ಕಣ್ಣು ಮುಚ್ಚಿ ಕುಳಿತಿದೆ. ಜನ ಪ್ರಶ್ನೆ ಮಾಡುತ್ತಿದ್ದಾರೆ. ಇಷ್ಟು ಹಣ ಹೇಗೆ ಗೋಪಾಲಯ್ಯರಿಗೆ ಬಂತು ಎಂದು.ಆದರೆ, ಗೋಪಾಲಯ್ಯ ನಮ್ಮ ಅಭ್ಯರ್ಥಿಯ ಅಪಪ್ರಚಾರ ದಲ್ಲಿ ತೊಡಗಿದ್ದಾರೆ. ಅಭ್ಯರ್ಥಿಯ ಸಹೋದರ ಸಂಬಂಧಿ ನಮ್ಮ ಅಭ್ಯರ್ಥಿ ಗೆ ಅವಾಚ್ಯ ಪದಗಳಿಂದ ಬೈದಿದ್ದಾರೆ.ಜಾತಿಯ ಹೆಸರು ಹೇಳಿ ಅಪಮಾನ ಮಾಡಿದ್ದಾರೆ ಎಂದು ದೂರಿದರು.ವಿಧಾನ ಪರಿಷತ್ತು ಸದಸ್ಯ ತಿಪ್ಪೇಸ್ವಾಮಿ ಮಾತನಾಡಿ ಡಾ.ಗಿರೀಶ್ ನಾಶಿ ಸಂಭಾವಿತ ವ್ಯಕ್ತಿ. ಇಂತವರನ್ನು ಜಾತಿ ನಿಂದನೆ ಮಾಡಿದ್ದಾರೆ.ಆ ಕ್ಷೇತ್ರದ ಬಿಜೆಪಿ ನಾಯಕರು ವ್ಯಕ್ತಿತ್ವ ನಿಂದನೆಯನ್ನೂ ಕ್ಷೇತ್ರದಲ್ಲಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link