ಪೊಲೀಸ್‌ ವರ್ಗಾವಣೆ : ಜಾತಿ ಬಳಕೆ ಸಹಿಸಲಸಾಧ್ಯ : ಸಿಎಂ

ಬೆಂಗಳೂರು:

      ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು ಮತ್ತು ಸಹಿಸಲಸಾಧ್ಯ. ಹಾಗೆ ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು.

     ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು. ಪೊಲೀಸ್‌ ಅಧಿಕಾರಿಗಳು ಜಾತಿ ಕಾರ್ಡ್‌ ಬಳಸಿ ವರ್ಗಾವಣೆ ಪಡೆಯುವುದು ತೀರಾ ಅನುಚಿತವಾಗಿದ್ದು, ಇಂತಹ ನಡೆಯನ್ನು ಸಹಿಸಲಸಾಧ್ಯ ಎಂದು ಹೇಳಿದರು.

     ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ. ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣಕ್ಕೆ ಬಜೆಟ್ ನಲ್ಲಿ ಹಣ ನೀಡಲಾಗುವುದು. ಖಾಲಿ ಇರುವ ಪೊಲೀಸ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು. ಕಾನೂನು ಮತ್ತು ಸುವ್ಯವಸ್ಥೆ ಜಾರಿಯಲ್ಲಿರಬೇಕು.

     ಕಾನೂನು ಸುವ್ಯವಸ್ಥೆ ಉತ್ತಮವಾದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ. ಹೂಡಿಕೆಯ ಹರಿವು ಕಾನೂನು ಸುವ್ಯವಸ್ಥೆಯ ಮೇಲೆ ಅವಲಂಬಿತವಾಗಿರುತ್ತದೆ. ಹೂಡಿಕೆಗಳು ಹೆಚ್ಚಾದಾಗ ಉದ್ಯೋಗಾವಕಾಶಗಳು ಹೆಚ್ಚು. ಉದ್ಯೋಗ ಸೃಷ್ಟಿಯಾಗುತ್ತದೆ, ಆಗ ರಾಜ್ಯದ ಆರ್ಥಿಕ ಬೆಳವಣಿಗೆ ಹೆಚ್ಚುತ್ತದೆ.ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಪೊಲೀಸ್ ಅಧಿಕಾರಿಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಧಾರಿಸಬೇಕು,’’ ಎಂದು ಸಲಹೆ ನೀಡಿದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap