ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ*

ಹುಬ್ಬಳ್ಳಿ:

    ಭಾರತೀಯ ಜನತಾ ಪಕ್ಷದ ನೇತೃತ್ವದಲ್ಲಿನ ಕೇಂದ್ರ ಸರಕಾರವು ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಅತಿಕ್ರಮಣ ಮಾಡುತ್ತಿದೆ. ದೇಶದ ಸಂಸತ್ತಿನ ಭದ್ರತಾ ಲೋಪವನ್ನು ಪ್ರಶ್ನಿಸಿದ್ದಕ್ಕಾಗಿ 142 ಉಭಯ ಸದನಗಳ ಸಂಸದರನ್ನು ಅಮಾನತ್ತಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಅನುಕಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಮಾಡಿದರು.

   ಸ್ವಾತಂತ್ರ ನಂತರ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಈ ರೀತಿಯ ಹಲ್ಲೆಯಾಗಿರುವುದು ಬಿಜೆಪಿಯ ಕರಾಳ ಇತಿಹಾಸವನ್ನು ಎತ್ತಿ ತೋರಿಸುತ್ತದೆ. ಈ ದುರಾಡಳಿತವನ್ನು ಖಂಡಿಸಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ದೇಶಾದ್ಯಂತ ಇಂದು ನೀಡಿದ ಪ್ರತಿಭಟನಾ ಅಂಗವಾಗಿ ನಗರದ ತಹಸ್ದೀಲಾರ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

   ಧಾರವಾಡ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯ ಉಳಿವಿಗಾಗಿ ಒಂದಾಗಬೇಕು. ಭಾರತೀಯ ಜನತಾ ಪಕ್ಷ ಸರ್ವಾಧಿಕಾರತ್ವ ಧೋರಣೆ ಅನುಸರಿಸುತಿದ್ದು ಇದೊಂದು ಪ್ರಜಾ ಪ್ರತಿನಿಧಿ ಅಧಿಕಾರಿ ಹಾಗೂ ಹಕ್ಕುಗಳನ್ನ ಪ್ರಶ್ನೆ ಮಾಡಿದಂತಾಗಿದೆ ಎಂದರು.

   ನಂತರ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯು ಬಿಜೆಪಿಯ ದುರಾಡಳಿತವನ್ನು ಖಂಡಿಸಿ ಪ್ರಜಾಪ್ರಭುತ್ವದ ಉಳಿವಿಗಾಗಿ ತಹಶೀಲ್ದಾರ್ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.‌ ಕಾಂಗ್ರೆಸ್ ಧಾರವಾಡ ಗ್ರಾಮಾಂತರ ಸಮಿತಿ ಅಧ್ಯಕ್ಷ ಅನೀಲ ಕುಮಾರ್ ಪಾಟೀಲ್, ಎಲ್ಲ ಘಟಕಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಸದಸ್ಯರು, ಕೆಪಿಸಿಸಿ ಸದಸ್ಯರುಗಳು ಬ್ಲಾಕ್ ಅಧ್ಯಕ್ಷರುಗಳು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಭಾಗವಹಿಸಿದ್ದರು.

   ಹುಬ್ಬಳ್ಳಿ ಧಾರವಾಡ ಗ್ರಾಮಾಂತರ ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಅನೀಲ ಕುಮಾರ್ ಪಾಟೀಲ್ ಮಾತನಾಡಿಕೇಂದ್ರ ಬಿಜೆಪಿ ಸರ್ಕಾರ ಸಂಸತ್ತಿನ ಉಭಯ ಸದನಗಳ ೧೪೨ ಸದಸ್ಯರನ್ನು ಅಸಂವಿಧಾನಿಕ ರೀತಿಯಲ್ಲಿ ಅಮಾನತ್ತುಗೊಳಿಸಿ, ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಕೇಂದ್ರದ ಬಿಜೆಪಿ ಸರ್ಕಾರದಿಂದಾಗಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ನರೇಂದ್ರ ಮೋದಿ ನಿರಂಕುಶ ಆಡಳಿತ ನಡೆಸುತ್ತಿದ್ದಾರೆ ಆಕ್ರೋಶ ವ್ಯಕ್ತಪಡಿಸಿದರು.

   ಸಂಸತ್ತಿನ ಒಳಗೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಯಬೇಕು. ನಡೆದಿರುವ ತಪ್ಪಿನ ಬಗ್ಗೆ ನಿಷ್ಪಕ್ಷವಾಗಿ ತನಿಖೆ ಆಗಬೇಕು. ಸಂಸದ ಪ್ರತಾಪ್ ಸಿಂಹ ರಾಜೀನಾಮೆ ಕೊಡಲೇಬೇಕು ಎಂದು ಆಗ್ರಹಿಸಿದರು. ಬಿಜೆಪಿ ಸರ್ಕಾರ ಇರುವಾಗ ಭದ್ರತೆಗೆ ಯಾಕೆ ಒತ್ತು ಕೊಡುವುದಿಲ್ಲ ಎನ್ನುವುದು ಯಕ್ಷ ಪ್ರಶ್ನೆಯಾಗಿದೆ.

   ಇವುಗಳನ್ನೆಲ್ಲಾ ಚರ್ಚೆ ಮಾಡಬೇಕಿರುವಾಗ ಸಂಸದರನ್ನು ಅಮಾನತ್ತು ಮಾಡುವ ಮೂಲಕ ಬಿಜೆಪಿ ಹೇಡಿತನ ಪ್ರದರ್ಶಿಸಿದೆ. ಈ ಅಮಾನತ್ತು ವಾಪಸ್ ಪಡೆದುಕೊಂಡು ಚರ್ಚೆ ನಡೆಯುವುದಕ್ಕೆ ಆಸ್ಪದ ಕೊಡಬೇಕು. ಯಾವುದೇ ರೀತಿಯ ನಿರಂಕುಶ ಆಡಳಿತ ಮಾಡಬಾರದು ಎಂದು ಒತ್ತಾಯಿಸಿದರು.

   ಕೆಪಿಸಿಸಿ ಸದಸ್ಯ ಸತೀಶ್ ಮೆಹರವಾಡೆ, ವಸಂತ ಲದ್ವಾ, ಮೋಹನ್ ಹಿರೇಮನಿ, ವೀರಣ್ಣ ನಿರಲಗಿ, ಬಂಗಾರೇಶ ಹಿರೇಮಠ, ತಾಲೂಕು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಉಪಾಧ್ಯಕ್ಷರು , ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು ‌

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap