ಮಧುಗಿರಿ
ಸರ್ಕಾರವು ರೈತರ ಸಮಸ್ಯೆಗಳನ್ನು ಮನಗಂಡು ಜಿಲ್ಲೆಯಲ್ಲಿಯೇ ಪ್ರಥಮವಾಗಿ ಈ ಹೋಬಳಿಯಲ್ಲಿ ಮೇವು ಬ್ಯಾಂಕ್‍ನ್ನು ತೆರೆದಿದ್ದು, ಒಂದು ಜಾನುವಾರಿಗೆ ಪ್ರತಿ ದಿನಕ್ಕೆ ಕೆಜಿಗೆ ಎರಡು ರೂ.ನಂತೆ ಐದು ಕೆಜಿ ಮೇವನ್ನು ನೀಡಲು ಉದ್ದೇಶಿಸಿದೆ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು.
ತಾಲ್ಲೂಕಿನ ದೊಡ್ಡೇರಿ ಹೋಬಳಿಯ ಬಡವನಹಳ್ಳಿ ಸಮೀಪದ ಇಂದಿರಾ ಗ್ರಾಮದಲ್ಲಿ ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಮತ್ತು ಪಶು ಇಲಾಖೆ ವತಿಯಿಂದ ಏರ್ಪಡಿಸಿದ್ದ ಮೇವು ಬ್ಯಾಂಕ್ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಸರ್ಕಾರವು ಹತ್ತು ರೂ. ಗೆ ಒಂದು ಕೆಜಿಯಂತೆ ಹುಲ್ಲನ್ನು ಖರೀದಿ ಮಾಡಿ ರೈತರಿಗೆ ರಿಯಾಯಿತಿ ದರದಲ್ಲಿ ಹುಲ್ಲನ್ನು ಒದಗಿಸುತ್ತಿದೆ. ಪ್ರಸ್ತುತ ರಾಜ್ಯ ಸರ್ಕಾರವು ರೈತರ ಪರವಾಗಿದ್ದು, ಅವರ ಸಮಸ್ಯೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮೇವು ಬ್ಯಾಂಕ್‍ಗಳನ್ನು ತೆರೆಯಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪ್ರತಿ ಪಂಚಾಯಿತಿ ಮಟ್ಟದಲ್ಲಿ ಮೇವು ಬ್ಯಾಂಕನ್ನು ತೆರೆಯಲು ಉದ್ದೇಶಿಸಿದ್ದು, ಅಗತ್ಯವಾದಲ್ಲಿ ಗೋ ಶಾಲೆಗಳನ್ನು ತೆರೆಯಲಾಗುವುದು ಎಂದರು. ಜಿಲ್ಲಾ ಪಂಚಾಯಿತಿ ಸದಸ್ಯ ಚೌಡಪ್ಪ, ತಾ.ಪಂ ಸದಸ್ಯ ದೊಡ್ಡಯ್ಯ, ತಹಸೀಲ್ದಾರ್ ರಮೇಶ್ ಬಾಬು ಮುಂತಾದವರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
