ಶಾಂತಿ ಕದಡಿದರೆ ಯಾರನ್ನು ಬಿಡುವುದಿಲ್ಲ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: 

      ನಾವು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ,  ಒಂದು ವೇಳೆ ಶಾಂತಿ ಕದಡಿದರೆ ಅದು ಭಜರಂಗದಳ ಅಥವಾ ಆರ್‌ಎಸ್‌ಎಸ್ ಎಂಬುದನ್ನು ನಾವು ಪರಿಗಣಿಸುವುದಿಲ್ಲ ಎಂದು ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

    ಕಾನೂನನ್ನು ಕೈಗೆ ತೆಗೆದುಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿ. ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಭಜರಂಗದಳ, ಆರ್‌ಎಸ್‌ಎಸ್ ಸೇರಿದಂತೆ ಯಾವುದೇ ಸಂಘಟನೆಯನ್ನು ನಿಷೇಧಿಸಲು ಹಿಂದೆ  ಮುಂದೆ ಯೋಚಿಸುವುದಿಲ್ಲ ಎಂದಿದ್ದಾರೆ.
   ಹಿಜಾಬ್, ಹಲಾಲ್ ಕಟ್ ಮತ್ತು ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆಯಲಿದೆ ಎಂದು ಅವರು ಹೇಳಿದರು. ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯವಿಲ್ಲದೆ ಕೆಲವು ಅಂಶಗಳು ಮುಕ್ತವಾಗಿ ವಿಹರಿಸುತ್ತಿವೆ.  ಕಳೆದ ಮೂರು ವರ್ಷಗಳಿಂದ ಈ ಪ್ರವೃತ್ತಿ ನಡೆಯುತ್ತಿದೆ ಎಂದು ಪ್ರಿಯಾಂಕ್ ಹೇಳಿದ್ದಾರೆ.

 

    ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜನರು ಅವರನ್ನು ವಿರೋಧ ಪಕ್ಷದಲ್ಲಿ ಕೂರಿಸಲು ಕಾರಣವೇನು ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕು. ಕೇಸರಿಕರಣ ತಪ್ಪು ಎಂದು ಹೇಳಿದ್ದೇವೆ, ಎಲ್ಲರೂ ಅನುಸರಿಸಬಹುದಾದ ಬಸವಣ್ಣನವರ ತತ್ವಗಳನ್ನು ಕಾಂಗ್ರೆಸ್ ಅನುಸರಿಸುತ್ತದೆ ಎಂದು ಮಾಹಿತಿ ನೀಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap