ಫ್ಲೈಯಿಂಗ್‌ ಕಿಸ್‌ ಪ್ರಕರಣ : ರಾಹುಲ್‌ ವಿರುದ್ಧ ಸ್ಮೃತಿ ಆಕ್ರೋಶ

ನವದೆಹಲಿ: 

  ಕಾಂಗ್ರೆಸ್ ರಾಹುಲ್ ಗಾಂಧಿ ಅವರ ‘ಫ್ಲೈಯಿಂಗ್ ಕಿಸ್’ಗೆ ಕೇಂದ್ರ ಸಚಿವೆ ಹಾಗೂ ಬಿಜೆಪಿ ಸಂಸದೆ ಸ್ಮೃತಿ ಇರಾನಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇಂತಹ ಅಸಭ್ಯತೆಯನ್ನು ಸಂಸತ್ತು ಹಿಂದೆಂದೂ ಕಂಡಿರಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

   ಅವಿಶ್ವಾಸ ನಿರ್ಣಯದ ಕುರಿತು ರಾಹುಲ್ ಗಾಂಧಿ ಭಾಷಣ ಮುಕ್ತಾಯಗೊಳಿಸಿದ ನಂತರ ಮಾತನಾಡಿದ ಸ್ಮೃತಿ ಇರಾನಿ ಅವರು, “ಕೆಲವರ ವರ್ತನೆಯನ್ನು ನಾನು ಆಕ್ಷೇಪಿಸುತ್ತೇನೆ. ನನಗಿಂತ ಮುಂಚೆ ಮಾತನಾಡಿದ ವ್ಯಕ್ತಿ, ಹೊರಡುವ ಮುನ್ನ ಅಸಭ್ಯತೆಯನ್ನು ಪ್ರದರ್ಶಿಸಿದರು.  ಸ್ತ್ರೀದ್ವೇಷಿ ಪುರುಷನೊಬ್ಬನಿಂದ ಮಾತ್ರ ಮಹಿಳೆಯರು ಹಾಜರಿರುವ ಸದನಕ್ಕೆ ಫ್ಲೈಯಿಂಗ್ ಕಿಸ್ ಮಾಡಲು ಸಾಧ್ಯ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.

    ಇನ್ನು ಮಣಿಪುರ ವಿಚಾರಕ್ಕೆ ಸಂಬಂಧಿಸಿದಂತೆ “ಮಣಿಪುರದಲ್ಲಿ ಭಾರತ ಮಾತೆಯ ಕೊಲೆ”ಯಾಗಿದೆ ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ನಾನು ಖಂಡಿಸುತ್ತೇನೆ ಎಂದು ಸ್ಮೃತಿ ಇರಾನಿ, ಸಂಸತ್ತಿನಲ್ಲಿ ಭಾರತ ಮಾತೆಯ ಹತ್ಯೆಯಾಗಿದೆ ಎಂದು ಸಂಸದರೊಬ್ಬರು ಮಾತನಾಡಿದ್ದು ಇದೇ ಮೊದಲು. ಈ ರೀತಿಯ ಹೇಳಿಕೆ ನೀಡುವಾಗ ಕಾಂಗ್ರೆಸ್ ಸದಸ್ಯರು ಮೇಜು ಕುಟ್ಟುತ್ತಿದ್ದರು ಎಂದು ಸ್ಮೃತಿ ಇರಾನಿ ಕಿಡಿ ಕಾರಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ