ಬೆಂಗಳೂರು:
ಕೆಲವು ವಿಭಾಗಗಳಿಂದ ಸ್ವೀಕರಿಸಿರುವ ಪತ್ರಗಳಲ್ಲಿ 2022-23ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್‌ಗಳಲ್ಲಿ ಪದವಿ, ಸ್ನಾತಕೋತ್ತರ, ಡಿಪ್ಲೋಮಾ ಬಿ.ಫಾರ್ಮ, ಕಾನೂನು ಪದವಿ ಹಾಗೂ ಮುಂತಾದ ಕೋರ್ಸುಗಳ ವಿದ್ಯಾರ್ಥಿಗಳ ಬಸ್‌ಪಾಸ್ ಜೂನ್-2023 ರ ಅಂತ್ಯದವರೆಗೆ ವಿತರಿಸಲಾಗಿದ್ದು, ಪರೀಕ್ಷೆಗಳನ್ನು ಜುಲೈ / ಆಗಸ್ಟ್-2023ರಲ್ಲಿ ನಡೆಸುವುದಾಗಿ ಕೆಲವು ವಿಶ್ವವಿದ್ಯಾನಿಲಯದಿಂದ ಅಧಿಸೂಚನೆಯನ್ನು ಹೊರಡಿಸಿರುವುದರಿಂದ, ವಿದ್ಯಾರ್ಥಿ ಬಸ್ ಪಾಸ್ ಅವಧಿಯನ್ನು ವಿಸ್ತರಿಸುವಂತೆ ಕೋರಿರುವುದನ್ನು ಪರಿಶೀಲಿಸಲಾಯಿತು.
ವಿಭಾಗೀಯ ನಿಯಂತ್ರಣಾಧಿಕಾರಿಗಳು ಕೆಳಕಂಡಂತೆ ಕ್ರಮವಹಿಸುವಂತೆ ತಿಳಿಸಲಾಗಿದೆ.
1. ಯಾವ ಕೋರ್ಸ್ಗಳಿಗೆ ಮತ್ತು ಯಾವ ತರಗತಿಗಳು ಎಲ್ಲಿಯವರೆಗೆ ನಡೆಯುತ್ತವೆ ಎಂಬುದರ ಬಗ್ಗೆ ಸಂಬಂಧಿಸಿದ ಕಾಲೇಜುಗಳಿಂದ ದೃಢೀಕರಣ ಪತ್ರ ಪಡೆಯುವುದು.
2. ಅದರಂತೆ ಸದರಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಬಸ್ ಪಾಸುಗಳನ್ನು ಒಂದು ಅಥವಾ ಎರಡು ತಿಂಗಳ ಅವಧಿಗೆ ವಿಸ್ತರಣೆ ಮಾಡುವುದು.
3. ಪಾಸ್‌ಗಳ ವಿಸ್ತರಣೆಗಾಗಿ ನಿಯಮಾವಳಿಯಂತೆ ಒಂದು / ಎರಡು ತಿಂಗಳ ಶುಲ್ಕವನ್ನು ಹಾಗೂ ಸಂಸ್ಕರಣ ಶುಲ್ಕವನ್ನು ಪಾವತಿಸಿಕೊಂಡು, ಸದರಿ ರಶೀದಿಯಲ್ಲಿ ವಿದ್ಯಾರ್ಥಿಯ ಹೆಸರು ಹಾಗೂ ಬಸ್ ಪಾಸಿನ ಸಂಖ್ಯೆಯನ್ನು ಖಡ್ಡಾಯವಾಗಿ ನಮೂದಿಸುವುದು.
4. 2022-23ನೇ ಸಾಲಿನ ಬಸ್‌ಪಾಸ್ ಮತ್ತು ಶುಲ್ಕ ಪಾವತಿ ರಶೀದಿ ಎರಡನ್ನೂ ತೋರಿಸಿ ಪಾಸಿನಲ್ಲಿರುವ ಮಾರ್ಗದಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸಲು ಅವಕಾಶ ಕಲ್ಪಿಸುವುದು. ಮೇಲ್ಕಂಡಂತೆ ಚಾಲಕ / ನಿರ್ವಾಹಕರುಗಳಿಗೆ ಅಗತ್ಯ ಮಾಹಿತಿ ನೀಡಿ ಸೂಕ್ತ ಕ್ರಮವಹಿಸಲು ತಿಳಿಸಲಾಗಿದೆ.