ಬಾಲಾಜಿ ಮೇಲೆ ದಾಳಿ: ಇದು ರಾಜಕೀಯ ಕಿರುಕುಳ : ಖರ್ಗೆ

ನವದೆಹಲಿ

      ತಮಿಳುನಾಡು ರಾಜ್ಯದ ಇಂಧನ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ತಡರಾತ್ರಿ ಬಂಧಿಸಿದೆ. ಈ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಕ್ರಿಯಿಸಿ, ಇದು “ರಾಜಕೀಯ ಕಿರುಕುಳ ಮತ್ತು ಸೇಡಿನ ಹೊರತು ಬೇರೇನೂ ಅಲ್ಲ” ಎಂದು ಕೇಂದ್ರ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದಾರೆ.

     ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಇಂಧನ ಸಚಿವರ ಬಂಧನವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರು ಖಂಡಿಸಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ವಿರೋಧಿಸುವವರ ವಿರುದ್ಧ ರಾಜಕೀಯ ಕಿರುಕುಳ ಮತ್ತು ಸೇಡಿನ ಕ್ರಮವಲ್ಲದೆ ಬೇರೇನೂ ಅಲ್ಲ ಎಂದು ಖರ್ಗೆ ಹೇಳಿದ್ದಾರೆ.

    ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರು ಕೇಂದ್ರ ಸರ್ಕಾರಿ ವ್ಯಾಪ್ತಿಯ ಏಜೆನ್ಸಿಗಳಿಂದ ನಡೆಯುವ ಈ ದಾಳಿಗಳು ‘ಸಾಕ್ಷ್ಯ’ಗಳನ್ನು ಸಂಗ್ರಹಿಸಲು ಸಹಾಯ ಮಾಡುವುದಿಲ್ಲ. ದಾಳಿ ಮೂಲಕ ಸೇಡಿನ ರಾಜಕಾರಣ ಮಾಡುತ್ತವೆ ಎಂದು ಅವರು ಆರೋಪಿಸಿದರು. ಇಡಿ ದಾಳಿ ಭಯಪಡಿಸುವ ಉದ್ದೇಶ? ಬಿಜೆಪಿ ವಿರುದ್ಧ ಮಾತನಾಡುವ ನಾಯಕರು ಮಾತನಾಡುವ ಮೇಲೆ ಇಡಿ, ಐಟಿ ದಾಳಿಗಳು ಸಾಮಾನ್ಯ ಎಂಬಂತಾಗಿವೆ. ಈ ದಾಳಿಗಳಿಂದ ವಿಪಕ್ಷಗಳನ್ನು ಭಯಪಡಿಸುವ, ರಾಜಕೀಯಕ್ಕಾಗಿ ಒತ್ತಡ ತರುವ ಉದ್ದೇಶ ಹೊಂದಿವೆ.

    ಇದರಿಂದ ಆರೋಪ ಕೇಳಿಬಂಧ ಪ್ರಕರಣದ ಯಾವ ಸಾಕ್ಷ್ಯಾಧಾರಗಳು ಸಂಗ್ರಹಿಸಲು ಸಾಧ್ಯವಾಗುವುದಿಲ್ಲ ಎಂದು ಸಂಸದರು ಟ್ವೀಟ್ ಮಾಡಿದ್ದಾರೆ. ಬಿಜೆಪಿಯಿಂದ ಹಣ ಪಡೆದ ಮುಸ್ಲಿಮರು ಕಾಂಗ್ರೆಸ್‌ಗೆ ಮತ ಹಾಕಿದರು: ಮಾಜಿ ಸಚಿವ ಎಂಟಿಬಿ ನಾಗರಾಜ್ ವಿವಾದ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರ ಮನೆ ಮೇಲೆ ಮಂಗಳವಾರ ಇಡಿ ದಾಳಿ ನಡೆದಿತ್ತು. ಈ ವೇಳೆ ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ಸಾಕ್ಷ್ಯಾಧಾರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಬಳಿಕ ಇಂದು ಬುಧವಾರ ಬೆಳಗ್ಗೆ ನಸುಕಿನ ಜಾವ ಸಚಿವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

       ಇಡಿ ಅಧಿಕಾರಿಗಳು ಕಸ್ಟಡಿಗೆ ಪಡೆದುಕೊಳ್ಳುವಾಗ ಬಾಲಾಜಿ ಅವರು ಕಳೆಗೆ ಕುಸಿದು ಬಿದ್ದಿದ್ದಾರೆ. ಈ ವೇಳೆ ಹೈಡ್ರಾಮಾವೇ ನಡೆಯಿತು. ಸದ್ಯ ಬಾಲಾಜಿ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಚೆನ್ನೈನ ಒಮಂದೂರಾರ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತಮ್ಮ ನಾಯಕನನ್ನು ಬಂಧಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಇಡಿ ಕ್ರಮದ ವಿರುದ್ಧ ಬಾಲಾಜಿ ಬೆಂಬಲಿಗರು ಪ್ರತಿಭಟಿಸಿದರು. ಕೇಂದ್ರ ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.

      2011-2015ರಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಎಐಎಡಿಎಂಕೆ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ 2011ರಿಂದ 2015ರ ಅವಧಿಯಲ್ಲಿ ಈಗಿನ ಬಂಧಿತ ಬಾಲಾಜಿ ಅವರು ಆಗ ಸಾರಿಗೆ ಸಚಿವರಾಗಿದ್ದರು. ಉದ್ಯೋಗಕ್ಕಾಗಿ ನಗದು ಹಣ ಅಕ್ರಮ ವರ್ಗಾಣೆ ಆರೋಪ ಎದುರಿಸುತ್ತಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಪ್ರಕರಣ ಕುರಿತು ಬಾಲಾಜಿ ಮೇಲೆ ತನಿಖೆ ನಡೆಸಲು ಕೋರ್ಟ್‌ ಅನುಮತಿ ನೀಡಿದ ತಿಂಗಳ ಬಳಿಕ ಮಂಗಳವಾರ ಅವರ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ದಾಳಿ, ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುವ ಹೊತ್ತಿನಲ್ಲಿ ಸೆಂಥಿಲ್ ಅವರಿಗೆ ಎದೆನೋವು ಕಾಣಿಸಿಕೊಂಡು ತೀವ್ರ ಅಸ್ವಸ್ಥತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap