ಮುಂಬೈ:
ಬಾಹುಬಲಿ ಖ್ಯಾತಿಯ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರಿಗೂ ಕೊರೋನಾ ಸೋಂಕು ಒಕ್ಕರಿಸಿದ್ದು, ಪ್ರಸ್ತುತ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಯುಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದ್ದು, ಕೆಲವು ದಿನಗಳ ಹಿಂದೆ ತಮನ್ನಾ ಅವರ ತಂದೆ ತಾಯಿಗಳಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಕಾರಣ ತಮನ್ನಾ ತಮ್ಮ ಕುಟುಂಬ ಹಾಗೂ ಎಲ್ಲ ಸಿಬ್ಬಂದಿಗೆ ಕೊರೊನಾ ಪರೀಕ್ಷೆ ಮಾಡಿಸಿದ್ದರು. ಈ ಪರೀಕ್ಷೆಯಲ್ಲಿ ತಂದೆ ತಾಯಿಗೆ ಪಾಸಿಟಿವ್ ಬಂದಿದ್ದು.. ತಮನ್ನಾ ಸೇರಿ ಸಿಬ್ಬಂದಿಗೆ ನೆಗೆಟಿವ್ ಬಂದಿತ್ತು. ಇತ್ತೀಚಿಗೆ ತಮನ್ನಾ ತಂದೆ ತಾಯಿ ಕೊರೊನಾದಿಂದ ಚೇತರಿಸಿಕೊಂಡು ಈಗ ಆರೋಗ್ಯದಿಂದಿದ್ದಾರೆ. ಆದರೆ ಈಗ ತಮನ್ನಾ ಅವರಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮತ್ತೆ ಅವರು ಪರೀಕ್ಷೆಗೆ ಒಳಗಾಗಿದ್ದರು. ಇದೀಗ ಅವರ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದ್ದು. ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
