ಬೆಂಗಳೂರು:
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಂತರ ಈಗ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೂ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಿಂದ ಮಂಗಳವಾರ ಖುಲಾಸೆಗೊಂಡಿದ್ದಾರೆ.
ಯಡಿಯೂರಪ್ಪ ಅವರ ವಿರುದ್ಧ ಸಿರಾಜಿನ್ ಬಾಷಾ ಹಾಗೂ ಬಾಲಕೃಷ್ಣ ಎಂಬುವವರು ದಾಖಲಿಸಿದ್ದ ಅಕ್ರಮ ಡಿನೋಟಿಫಿಕೇಷನ್ ಪ್ರಕರಣವನ್ನು ಸೆಷನ್ಸ್ ಕೋರ್ಟ್ ಇಂದು ವಜಾಗೊಳಿಸಿದೆ.ಬೆಂಗಳೂರಿನ ರಾಚೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸೇರಿದಂತೆ ಒಟ್ಟು 15 ಪ್ರಕರಣಗಳಲ್ಲಿ ಯಡಿಯೂರಪ್ಪ ಆರೋಪಿಯಾಗಿದ್ದರು. ಈ ಎಲ್ಲಾ ಪ್ರಕರಣಗಳಿಂದಲೂ ಯಡಿಯೂರಪ್ಪ ಮುಕ್ತಿ ಪಡೆದಿದ್ದಾರೆ.ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ವಿ. ಪಾಟೀಲ್ ಅವರು ಯಡಿಯೂರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಿ ಆದೇಶ ಹೊರಡಿಸಿದ್ದಾರೆ.ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಪ್ರಕರಣವನ್ನು ವಜಾಗೊಳಿಸುತ್ತಿರುವುದಾಗಿ ನ್ಯಾಯಾಧೀಶರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
