ಬಿಜೆಪಿ ಆಡಳಿತದಡಿ ರಾಜ್ಯ ಅಭಿವೃದ್ಧಿ ಪಥದಲ್ಲಿ ಸಾಗಲಿದೆ: ಯಡಿಯೂರಪ್ಪ

ಬೆಂಗಳೂರು

       ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ರೋಡ್ ಷೋ ನಡೆಸಿದರು.

       ಬಿಜೆಪಿ ಅಭ್ಯರ್ಥಿ ಬಿ.ಸಿ. ನಾಗೇಶ್ ಅವರ ಪರವಾಗಿ ತಿಪಟೂರು ನಗರದಲ್ಲಿ ಭರ್ಜರಿ ರೋಡ್ ಷೋ ನಡೆಸಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನಮ್ಮ ಜೊತೆಗಿರುವಾಗ ರಾಜ್ಯ ಅಭಿವೃದ್ಧಿ ಪಥದಲ್ಲಿ ಸಾಗುವುದರಲ್ಲಿ ಅನುಮಾನ ಬೇಡ. ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿದ್ದೇನೆ.

      ರಾಜ್ಯದಲ್ಲಿ ನಾವು 135ಕ್ಕೂ ಹೆಚ್ಚು ಸೀಟುಗಳನ್ನು ಗೆದ್ದು ಮತ್ತೆ ಬಿಜೆಪಿ ಸರ್ಕಾರ ರಚನೆ ಮಾಡುತ್ತೇವೆ ಎಂದು ವಿಶ್ವಾಸದಿಂದ ನುಡಿದರು. ಬಿಜೆಪಿಯನ್ನು ಜನತೆ ಈ ಬಾರಿ ಬೆಂಬಲಿಸಲಿದ್ದಾರೆ. ಜನವಿರೋಧಿ ಕಾಂಗ್ರೆಸ್ ಪಕ್ಷವನ್ನು ಈ ಬಾರಿ ಸೋಲಿಸುವುದು ಖಚಿತ ಎಂದು ನುಡಿದರು. ಕಾಂಗ್ರೆಸ್ ಪಕ್ಷವು ವಿಷಯಗಳೇ ಇಲ್ಲದೆ ಅನಗತ್ಯ ಆರೋಪಗಳನ್ನು ಮಾಡುತ್ತಿದೆ ಎಂದು ಟೀಕಿಸಿದರು.

       ಶಿಕ್ಷಣ ಸಚಿವರು, ತಿಪಟೂರಿನ ಶಾಸಕ ಬಿ.ಸಿ. ನಾಗೇಶ್ ಅವರನ್ನು 25 ಸಾವಿರ ಮತಗಳ ಅಂತರದಿAದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಶಿಕ್ಷಣ ಸಚಿವ ನಾಗೇಶ್ ಅವರ ಬಗ್ಗೆ ನಾನು ಏನೂ ಹೇಳುವ ಅಗತ್ಯವಿಲ್ಲ. ತಿಪಟೂರು ಕ್ಷೇತ್ರವನ್ನು ಮಾದರಿ ತಾಲೂಕಾಗಿ ಅಭಿವೃದ್ಧಿಪಡಿಸುತ್ತಿದ್ದು, ಶಿಕಾರಿಪುರಕ್ಕಿಂತ ಹೆಚ್ಚಾಗಿ ಅಭಿವೃದ್ಧಿಪಡಿಸಿರುವ ನಾಗೇಶ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇಲ್ಲಿನ ಜನಸ್ತೋಮ ನೋಡಿದರೆ ನಾಗೇಶ್ ಅವರು 25 ಸಾವಿರ ಮತಗಳ ಅಂತರದಿAದ ಗೆಲ್ಲುತ್ತಾರೆ ಎನ್ನುವ ವಿಶ್ವಾಸವಿದೆ? ಎಂದು ಯಡಿಯಯೂರಪ್ಪ ಅವರು ನುಡಿದರು.

         ತಿಪಟೂರು ತಾಲೂಕಿನ ಜನ ನಾಗೇಶ್ ಅವರನ್ನು ಶಾಸಕರಾಗಿ ಮಾತ್ರವಲ್ಲ, ಮಂತ್ರಿಯಾಗಿ ಆಯ್ಕೆ ಮಾಡಿ ಕಳುಹಿಸುತ್ತಿರುವಿರಿ. ಹೀಗಾಗಿ, ತಮ್ಮ ಸಂಪೂರ್ಣ ಆಶೀರ್ವಾದ ನಾಗೇಶ್ ಅವರ ಮೇಲಿರಲಿ? ಎಂದು ಯಡಿಯೂರಪ್ಪ ಅವರು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link