ಬೆಂಗಳೂರು:
‘ಹುಬ್ಬಳ್ಳಿ ಗಲಭೆ ವಿಚಾರವಾಗಿ ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರದ ಸಚಿವರು ಹಾಗೂ ಸಂಸದರು ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಈ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷದವರು ಭಾಗಿಯಾಗಿದ್ದರೆ, ಅವರನ್ನು ಬಂಧಿಸಲಿ. ಈವರೆಗೂ ಯಾಕೆ ಬಂಧಿಸಿಲ್ಲ? ನಮ್ಮ ಜಿಲ್ಲಾಧ್ಯಕ್ಷರು ಆ ಸ್ಥಳದಲ್ಲಿದ್ದರು ಎಂದು ಹೇಳುತ್ತಾರೆ. ಪೊಲೀಸರೇ ಪರಿಸ್ಥಿತಿ ನಿಯಂತ್ರಿಸಲು ಶಾಂತಿ ಕಾಪಾಡಲು ನಮ್ಮ ಜಿಲ್ಲಾಧ್ಯಕ್ಷರನ್ನು ಅಲ್ಲಿಗೆ ಆಹ್ವಾನಿಸಿದ್ದರು.
ಪೊಲೀಸರ ಆಹ್ವಾನದ ಮೇರೆಗೆ ನಮ್ಮ ಜಿಲ್ಲಾಧ್ಯಕ್ಷರು ಪೊಲೀಸ್ ಜೀಪ್ ಹತ್ತಿ ಮೈಕ್ ನಲ್ಲಿ ಎಲ್ಲರೂ ಶಾಂತವಾಗಿರುವಂತೆ ಮನವಿ ಮಾಡಿದ್ದಾರೆ. ಬಿಜೆಪಿ ನಾಯಕರು ಕೇವಲ ಕಾಂಗ್ರೆಸ್ ನಾಯಕರ ಮೇಲೆ ಆರೋಪ ಮಾಡಿ ಪಲಾಯನ ಮಾಡುತ್ತಿರುವುದೇಕೆ? ಅವರ ವಿರುದ್ಧ ಕ್ರಮ ಯಾಕೆ ಕೈಗೊಳ್ಳುತ್ತಿಲ್ಲ ಎಂದರು. ಪೊಲೀಸ್ ಆಯುಕ್ತರ ಜತೆ ಮಾತನಾಡಿದ್ದು, ಹುಬ್ಬಳ್ಳಿ ಪರಿಸ್ಥಿತಿ ಶಾಂತವಾಗಿದೆ. ಕೇವಲ ರಾಜಕೀಯ ಹಿತಾಸಕ್ತಿ ಕಾಪಾಡಿಕೊಳ್ಳಲು ಹುಬ್ಬಳ್ಳಿಗೆ ಬಿಜೆಪಿ ಬೆಂಕಿ ಹಚ್ಚುತ್ತಿದೆ. ಬಿಜೆಪಿ ತಮ್ಮ ರಾಜಕೀಯಕ್ಕೆ ರಾಜ್ಯವನ್ನೇ ಸುಡುತ್ತಿದ್ದಾರೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
