ಬೆಂಗಳೂರು:
ಪಕ್ಷಾಂತರದ ಬಗೆಗಿನ ನನ್ನ ಹೇಳಿಕೆ ನೈತಿಕ ಮತ್ತು ಸೈದ್ಧಾಂತಿಕವಾದದ್ದು. ಯಾರೇ ಆಗಲಿ ಪಕ್ಷಾಂತರ ಮಾಡುವುದು ತಪ್ಪು ಎನ್ನುವ ಅರ್ಥದಲ್ಲಿ ಮಾತನಾಡಿದ್ದೇನೆಯೇ ಹೊರತು ಬಿಜೆಪಿ ಬಗ್ಗೆ ಯಾವುದೇ ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ ಸ್ಪಷ್ಟೀಕರಣ ನೀಡಿದ್ದಾರೆ.
ನಾನು ಬಿಜೆಪಿಗೆ ಬಂದಿರುವುದನ್ನು ತಪ್ಪು ಎಂದು ಭಾವಿಸಿಯೂ ಇಲ್ಲ. ಆ ರೀತಿ ಹೇಳಿಕೆಯೂ ನೀಡಿಲ್ಲ. ಬಿಜೆಪಿಯಲ್ಲಿ ನನಗೆ ಯಾವುದೇ ಅಸಮಾಧಾನವಿಲ್ಲ. ಪಕ್ಷ ಮತ್ತು ನಾಯಕರು ನನ್ನನ್ನು ವಿಶ್ವಾಸದಿಂದ ನಡೆಸಿಕೊಳ್ಳುತ್ತಿದ್ದಾರೆ. ನಾನು ನನ್ನ ಜೀವನದಲ್ಲಿ ಯಾವುದೇ ತಪ್ಪು ಮಾಡಿಲ್ಲ. ಮಾಡಿರುವ ಒಂದೇ ತಪ್ಪೆಂದರೆ ಅದು ಪಕ್ಷಾಂತರ ಎಂದು ಪುನರುಚ್ಛರಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
