ಬಿಜೆಪಿ ಮುಖಂಡರಿಂದ ಮತದಾರರೊಡನೆ ಸಮಾಲೋಚನೆ ಅಭಿಯಾನ

0
8

ಚಳ್ಳಕೆರೆ

           ಪ್ರಧಾನ ಮಂತ್ರಿ ನರೇಂದ್ರಮೋದಿಯವರು ಪ್ರತಿಯೊಬ್ಬ ಮತದಾರನ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿ ಹೆಸರು ಹಾಗೂ ದಾಖಲಾತಿಗಳ ಪರಿಶೀಲನೆ ನಡೆಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಎಂ.ಎಸ್.ಜಯರಾಮ್ ನೇತೃತ್ವದಲ್ಲಿ ನಗರದ 30ನೇ ವಾರ್ಡ್ ವ್ಯಾಪ್ತಿಯಲ್ಲಿ ಮತದಾರರೊಡನೆ ಸಮಾಲೋಚನಾ ಸಭೆಯನ್ನು ಭಾನುವಾರ ನಡೆಸಲಾಯಿತು.

          ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಎಂ.ಎಸ್.ಜಯರಾಮ್ ಪ್ರತಿಯೊಬ್ಬ ಮತದಾರನು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕಿದೆ. ಮತದಾನ ಸಂದರ್ಭದಲ್ಲಿ ಮತಗಟ್ಟೆಗೆ ಹೋದಾಗ ಯಾವ ರೀತಿಯ ಲೋಪದೋಷವಿದ್ದಲ್ಲಿ ಮತ ಚಲಾಯಿಸಲು ಅವಕಾಶ ಇರುವುದಿಲ್ಲ.

           ಅದ್ದರಿಂದ ಈಗಲೇ ನಿಮ್ಮ ದಾಖಲಾತಿಗಳನ್ನು ನಿಮ್ಮ ಮತಗಟ್ಟೆ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸಿದ ಲೋಪದೋಷಗಳನ್ನು ಸರಿಪಡಿಸಿಕೊಂಡು ಸ್ವತಂತ್ರ್ಯವಾಗಿ ಮತ ಚಲಾಯಿಸಲು ಎಲ್ಲಾ ಮತದಾರರು ಮುಂದಾಗಬೇಕು. ಪ್ರಧಾನ ಮಂತ್ರಿಯವರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ಸಭೆಯನ್ನು ಆಯೋಜಿಸಲಾಗಿದೆ. ದಯಮಾಡಿ ಮತದಾನ ಹಕ್ಕು ಪಡೆದ ಪ್ರತಿಯೊಬ್ಬರೂ ಮತದಾನ ಮಾಡುವಂತೆ ಮನವಿ ಮಾಡಿದರು.

         ಮಂಡಲಾಧ್ಯಕ್ಷ ಬಿ.ವಿ.ಸಿರಿಯಣ್ಣ ಮಾತನಾಡಿ, ನಗರದ 31 ವಾರ್ಡ್‍ಗಳ ವ್ಯಾಪ್ತಿಯಲ್ಲೂ ಸಹ ಮತದಾರರೊಡನೆ ಸಮಲೋಚನೆ ನಡೆಸಿದ ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಜಾಗೃತಗೊಳಿಸಲಾಗುವುದು. ಮತದಾನ ಮಾಡುವುದು ಪ್ರತಿಯೊಬ್ಬನ ನಾಗರೀಕ ಹಕ್ಕಾಗಿದ್ದು, ಯಾವುದೇ ಕಾರಣಕ್ಕೂ ಈ ಹಕ್ಕಿನಿಂದ ಮತದಾರ ವಂಚಿತನಾಗಬಾರದು. ಪ್ರಜಾಪ್ರಭುತ್ವದ ಹಿನ್ನೆಲೆಯಲ್ಲಿ ಪ್ರತಿಯೊಬ್ಬರ ಮತದಾನಕ್ಕೂ ವಿಶೇಷ ಮೌಲ್ಯವಿದೆ ಎಂದರು.

         ಕಾರ್ಯಕ್ರಮವನ್ನು ಉದ್ದೇಶಿಸಿ ಜಿಲ್ಲಾ ಉಪಾಧ್ಯಕ್ಷ ಬಿ.ಎಸ್.ಶಿವಪುತ್ರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರತ್ನಮ್ಮ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ವೆಂಕಟೇಶ್, ಕ್ಷೇತ್ರ ಪ್ರಭಾರಿ ಟಿ.ಬೋರನಾಯಕ ಮುಂತಾದವರು ಮಾತನಾಡಿದರು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯೆ ಪಾಲಮ್ಮ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಟಿ.ಮಂಜುನಾಥ, ಕರೀಕೆರೆ ತಿಪ್ಪೇಸ್ವಾಮಿ, ಕಾಟಪ್ಪನಹಟ್ಟಿ ವೀರೇಶ್, ಮಹಿಳಾ ಘಟಕದ ಅಧ್ಯಕ್ಷೆ ಜಗದಾಂಬ, ಕಾರ್ಯದರ್ಶಿ ಇಂಧುಮತಿ, ಶ್ರೀಕಾಂತ್, ರಂಗಣ್ಣ, ಈಶ್ವರನಾಯಕ, ವೀರೇಶ್, ರಂಗಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

LEAVE A REPLY

Please enter your comment!
Please enter your name here