ಬಿಬಿಎಂಪಿಯಲ್ಲಿ ಉದ್ಯಾನವನಗಳಿನ್ನು ದಿನ ಪೂರ್ತಿ ಓಪನ್

ಬೆಳಗ್ಗೆ 5 ರಿಂದ ರಾತ್ರಿ 8 ರ ವರೆಗೆ ಸಾರ್ವಜನಿಕರ ಉಪಯೋಗಕ್ಕೆ ಅವಕಾಶ
ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಪರ್ಕ್’ಗಳಲ್ಲಿ ವಾಯು ವಿಹಾರಕ್ಕೆ ಪ್ರತಿ ದಿನ ಬೆಳಗ್ಗೆ 5 ರಿಂದ10 ರವರೆಗೆ ಹಾಗೂ ಸಂಜೆ 4.ರಿಂದ ರಾತ್ರಿ 8. ರವರೆಗೆ ಸಾರ್ವಜನಿಕರ ಉಪಯೋಗಕ್ಕಾಗಿ ಅವಕಾಶ ಕಲ್ಪಿಸಲಾಗಿತ್ತು. ಅದನ್ನು ಮಾರ್ಪಾಡು ಮಾಡಿ ಅನುಮತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇನ್ನು ಮುಂದೆ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲಕ್ಕಾಗಿ ಸಮಯವನ್ನು ಮಾರ್ಪಡಿಸಿ ಬೆಳಗ್ಗೆ 5.ರಿಂದ ರಾತ್ರಿ 8 ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಉದ್ಯಾನವನಗಳ ನಿರ್ವಹಣೆಗಾಗಿ ಬೆಳಗ್ಗೆ 10 ರಿಂದ ಮದ್ಯಾಹ್ನ 1.30 ರವರೆಗೆ ಸಮಯವನ್ನು ನಿಗಧಿಪಡಿಸಿ ಆದೇಶಿಸಲಾಗಿದೆ. ಉದ್ಯಾನವನಗಳ ನಿರ್ವಹಣೆಯ ಸಮಯದಲ್ಲಿ ಸಾರ್ವಜನಿಕರಿಗೆ ಅವಕಾಶ ಇರುವುದಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.