ಬೆಂಗಳೂರು:
118 ಕೋಟಿ ರೂಪಾಯಿ ಮೊತ್ತದ ನಕಲಿ ಬಿಲ್ ಸೃಷ್ಟಿಸಿದ ಆರೋಪದಲ್ಲಿ ಎಂಟು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಎಂಜಿನಿಯರ್‌ಗಳನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಅಲ್ಲದೆ ಹಗರಣದ ತನಿಖೆಗಾಗಿ ಬೆಂಗಳೂರು ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ತನಿಖಾ ಅಧಿಕಾರಿಯಾಗಿ ನೇಮಿಸಿದೆ.
ಲೋಕಾಯುಕ್ತ ವರದಿಯ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆ ಈ ಕಠಿಣ ಕ್ರಮವನ್ನು ಕೊಂಡಿದ್ದು ಸತೀಶ್ ಸಹಾಯಕ ಕಾರ್ಯಪಾಲಕ ಅಭಿಯಂತರರು, ದೊಡ್ಡಯ್ಯ ಮುಖ್ಯ ಅಭಿಯಂತರರು ಟಿವಿಸಿಸಿ, ಸಿದ್ದರಾಮಯ್ಯ ಸಹಾಯಕ ಅಭಿಯಂತರರು, ಬಸವರಾಜ್ ಪ್ರಭಾರ ಕಾರ್ಯಪಾಲಕ ಅಭಿಯಂತರರು, ಉಮೇಶ್ ಸಹಾಯಕ ಅಭಿಯಂತರು, ವೆಂಕಟಲಕ್ಷ್ಮೀ, ಸಹಾಯಕ ಕಾರ್ಯಾಪಾಲಕ ಅಭಿಯಂತರರು, ಶ್ರೀನಿವಾಸ್ ಕಾರ್ಯಪಾಲಕ ಅಭಿಯಂತರರು, ಶ್ರೀತೇಜ್, ಸಹಾಯಕ ಕಾರ್ಯಾಪಾಲಕ ಅಭಿಯಂತರನನ್ನು ಅಮಾನತು ಮಾಡಿದೆ.