ಬೆಂಗಳೂರು : ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಬೇಟಿ ಮಾಡಿ ಭದ್ರತೆಯನ್ನು ಪರಿಶೀಲಿಸಿದರು.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೋವಿಡ್ ಬಳಿಕ ನಡೆಯುತ್ತಿರುವ ಮೊದಲ ಪಂದ್ಯವಾಗಿದೆ. ಲಕ್ಷಾಂತರ ಅಭಿಮಾನಿಗಳು ಪಂದ್ಯ ವೀಕ್ಷಣೆ ಮಾಡಲು ಕಾತುರದಿಂದ ಕಾಯುತ್ತಿದ್ದಾರೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ಟಿ-20 ಸರಣಿಯ ಅಂತಿಮ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು ಪ್ರೇಕ್ಷಕರ ಸಂಪೂರ್ಣ ಹಾಜರಾತಿಯೊಂದಿಗೆ ಈ ಪಂದ್ಯ ನಡೆಯಲಿದೆ.
ಈ ಪಂದ್ಯವನ್ನು ಕ್ರೀಡಾಂಗಣದಲ್ಲಿ ವೀಕ್ಷಿಸಲು ಬಯಸುವ ಕ್ರಿಕೆಟ್ ಪ್ರೇಮಿಗಳಿಗೆ ಟಿಕೆಟ್ ಬಗೆಗಿನ ಮಾಹಿತಿಯನ್ನು ಕೆಎಸ್‌ಸಿಎ ಹಂಚಿಕೊಂಡಿದೆ. ಆಲ್‌ಲೈನ್ ಹಾಗೂ ಕೌಂಟರ್‌ನಲ್ಲಿ ಟಿಕೆಟ್ ಪಡೆದುಕೊಳ್ಳುವ ಅವಕಾಶವನ್ನು ನೀಡಲಾಗಿದ್ದು ಟಿಕೆಟ್ ದರ ಹಾಗೂ ಇತರ ಮಾಹಿತಿಗಳು ವೆಬ್ ನಲ್ಲಿ ಲಭ್ಯವಾಗಿದೆ. ಈಗಾಗಲೇ ಜೂ12 ರಿಂದ್ ಟಿಕೆಟ್ ಮಾರಾಟ ಆರಂಭವಾಗಿದ್ದು, ಪಂದ್ಯ ವೀಕ್ಷಿಸಲು ಅಭಿಮಾನಿಗಳು ಕಾಯುತ್ತಿದ್ದಾರೆ.
ಇನ್ನು ಕಳೆದ ಎರಡೂವರೆ ವರ್ಷಗಳಿಂದ ವಿಶ್ವದಾದ್ಯಂತ ಕೊರೋನಾ ವೈರಸ್ ದೊಡ್ಡ ಪ್ರಮಾಣದಲ್ಲಿ ಆಘಾತವನ್ನು ನೀಡಿದೆ. ಇದೇ ಮೊದಲಿಗೆ ಬೆಂಗಳೂರಿನ ಚಿನ್ನ ಸ್ವಾಮಿ ಕ್ರೀಡಾಂಗಣದಲ್ಲಿ ಟಿ20 ಪಂದ್ಯ ಆಯೋಜನೆ ಮಾಡಿದ್ದಾರೆ.
ಇತ್ತೀಚೆಗಷ್ಟೇ ಶ್ರೀಲಂಕಾ ವಿರುದ್ಧ ಟೆಸ್ಟ್ ಪಂದ್ಯವನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಾಗಿತ್ತು. ಇದೀಗ ಚುಟಕು ಕ್ರಿಕೆಟ್ ಸಮರಕ್ಕೂ ಕ್ರೀಡಾಂಗಣ ಸಜ್ಜಾಗುದ್ದು ಪ್ರೇಕ್ಷರ ವೀಕ್ಷಣೆಗೂ ಅವಕಾಶ ಕಲ್ಪಿಸಲಾಗಿದೆ.
ಭದ್ರತೆ ಪರಿಶೀಲಿಸಿದ ಗೃಹ ಸಚಿವ : ಭಾನುವಾರ ನಡೆಯಲಿರುವ ಟಿ-20 ಪಂದ್ಯದ ಹಿನ್ನೆಲೆಯಲ್ಲಿ ತೆಗೆದುಕೊಳ್ಳಲಾದ ರಕ್ಷಣೆ ಮತ್ತು ಭದ್ರತಾ ವ್ಯವಸ್ಥೆಯ ಮುಂಜಾಗರೂಕತಾ ಕ್ರಮಗಳ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಟೇಡಿಯಂಗೆ ಭೇಟಿ ಮಾಡಿ ಮಾಹಿತಿ ಪಡೆದರು.
ಕೆ.ಎಸ್.ಸಿ.ಎ ಯಿಂದ ಗೃಹ ಸಚಿವರಿಗೆ ಮನವಿ : ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಅಕಾಡೆಮಿ ಅಧ್ಯಕ್ಷ ರೋಜರ್ ಬಿನ್ನಿಯವರು, ಸಚಿವರಿಗೆ ಮನವಿಯನ್ನು ಸಲ್ಲಿಸಿ, 5 ದಿನಗಳ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಪಂದ್ಯಗಳಿಗೆ ಪೊಲೀಸ್ ಇಲಾಖೆ, ವಿಧಿಸುವ ಭದ್ರತಾ ಶುಲ್ಕವನ್ನು ನಾಲ್ಕು ಪಟ್ಟು ಹೆಚ್ಚಿಸಿದ್ದು, ಅದನ್ನು ಪರಿಷ್ಕರಿಸಬೇಕೆಂದು ಮನವಿ ಸಲ್ಲಿಸಿದರು.
ರಾಜ್ಯ ಕ್ರಿಕೆಟ್ ಸಂಸ್ಥೆಯ ಪದಾಧಿಕಾರಿಗಳಾದ ರೋಜರ್ ಬಿನ್ನಿ, ಸಂತೋಷ್ ಮೆನನ್, ವಿನಯ್ ಮೃತ್ಯುಂಜಯ, ಅಭಿರಾಮ್, ಕಾರ್ತಿಕ್, ಡಿಎಸ್ ಅರುಣ್ ಹಾಗೂ ಇತರರು ಉಪಸ್ಥಿತರಿದ್ದರು.