ಬೆಂಗಳೂರಿನ ಶಾಲೆಗಳಲ್ಲಿ ಕೊರೋನಾ ಸ್ಪೋಟ : ಆರೋಗ್ಯ ಸಚಿವರ ಸಭೆ

ಒಂದೇ ತರಗತಿಯ 21 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು

ಬೆಂಗಳೂರು: ಬಿಬಿಎಂಪಿಯ ವ್ಯಪ್ತಿಯ ಎರಡು ಶಾಲೆಯ ಒಟ್ಟು 31 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಸೋಂಕಿತ ವಿದ್ಯಾರ್ಥಿಯ ತರಗತಿಗಳಿಗೆ ರಜೆ ನೀಡಿಲಾಗಿದೆ. ಹಾಗೂ ಶಾಲೆಯ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಇತರೆ ಸಿಬ್ಬಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿ. ಕೊಠಡಿ ಹಾಗೂ ಶಾಲಾ ಆವರಣಕ್ಕೆ ಸೋಂಕು ನಿವಾರಕ ಸಿಂಪಡಣೆ ಮಾಡಿ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿಗಾ ವಹಿಸಲಾಗುತ್ತಿದೆ ಎಂದು ದಾಸರಹಳ್ಳಿ ವಲಯದ ಆರೋಗ್ಯ ವೈದ್ಯಾಧಿಕಾರಿ ಸುರೇಶ್ ರುದ್ರಪ್ಪ ಮಾಹಿತಿ ನೀಡಿದ್ದಾರೆ.

ನಗರದ ದಾಸರಹಳ್ಳಿ ವಲಯದ ಪೀಣ್ಯ ಎರಡನೇ ಹಂತದ ಖಾಸಗಿ ಶಾಲೆಯ 5ನೇ ತರಗತಿಯ 10 ವಿದ್ಯಾರ್ಥಿಗಳಿಗೆ ಸೋಮವಾರ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಕಳೆದ ಗುರುವಾರ ರಾಜಗೋಪಾಲ ನಗರದ ಖಾಸಗಿ ಶಾಲೆಯ 5 ಮತ್ತು 6ನೇ ತರಗತಿಯ ಒಟ್ಟು 21 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿತ್ತು ಎಂದು ತಿಳಿಸಿದರು.

ಬೆಂಗಳೂರಿನಲ್ಲಿ 21 ಕಂಟೈನ್ಮೆಂಟ್ ವಲಯಗಳ : ರಾಜಧಾನಿ ಬೆಂಗಳೂರಿನಲ್ಲಿ ಜೂನ್ ಆರಂಭದಿಂದ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು ಕಂಟೈನ್ಮೆಂಟ್ ವಲಯಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ, ಸೋಮವಾರ ಐದು ಹೊಸ ಕಂಟೈನ್ಮೆಂಟ್ ವಲಯ ಏರಿಕೆಯಾಗಿದೆ. ಈ ಮೂಲಕ ಒಟ್ಟು ಕಂಟೈನ್ಮೆಂಟ್ ವಲಯಗಳ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಮಹದೇವಪುರ ವಲಯದಲ್ಲಿ ನಾಲ್ಕು ಹಾಗೂ ದಾಸರಹಳ್ಳಿ ವಲಯದಲ್ಲಿ ಒಂದು ಹೊಸದಾಗಿ ಕಂಟೈನ್ಮೆಂಟ್ ವಲಯ ಸೃಷ್ಟಿಯಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಪ್ರತಿದಿನ 500ಕ್ಕೂ ಹೆಚ್ಚು ಕೇಸ್ : ನಗರದಲ್ಲಿ ಕೊರೋನಾ ಪ್ರಕರಣಗಳ ಸಮಖ್ಯೆ ಪ್ರತಿದಿನ 500ರ ಗಡಿದಾಟಿದೆ. ಸೋಮವಾರ 400ಕ್ಕೆ ಕುಸಿದಿತ್ತು. ಉಳಿದಂತೆ 358 ಮಂದಿ ಗುಣಮುಖರಾಗಿದ್ದು, ಸೋಂಕಿತರ ಸಾವಿನ ಬಗ್ಗೆ ವರದಿಯಾಗಿಲ್ಲ. ನಗರದಲ್ಲಿ 3,542 ಸಕ್ರಿಯ ಸೋಂಕಿನ ಪ್ರಕರಣಗಳಿದ್ದು, ಈ ಪೈಕಿ 29 ಮಂದಿ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರು ಐಸಿಯು ಮತ್ತು ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಎಲ್ಲರೂ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜುಲೈ ತಿಂಗಳಲ್ಲಿ 4ನೇ ಅಲೆ ಸಂಭವ : ಕೊರೋನಾ ಹೆಚ್ಚಳವಾಗುತ್ತಿರುವ ಬಗ್ಗೆ ಸೋಮವಾರ ಸಂಜೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಕೂಡ ಸಭೆ ನಡೆಸಿ ಅಗತ್ಯ ಕ್ರಮಗಳ ಭರವಸೆ ನೀಡಿದ್ದಾರೆ. ತಾಂತ್ರಿಕಾ ಸಲಹಾ ಸಮಿತಿಯ ತಜ್ಞರ ಪ್ರಕಾರ ಜುಲೈ ತಿಂಗಳಲ್ಲಿ 4ನೇ ಅಲೆ ಬರುವ ಸಾಧ್ಯತೆ ಇದೆ ಎಂದಿದ್ದಾರೆ. ಇಡೀ ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಹೊರತು ಪಡಿಸಿದರೆ ಬೆಂಗಳೂರಿನಲ್ಲಿ ಅತಿ ಹೆಚ್ಚು ಪ್ರಕರಣಗಳು ಏರಿಕೆಯಾಗುತ್ತಿದೆ. ಆಸ್ಪತ್ರೆ ದಾಖಲಾಗುವ ಪ್ರಕರಣಗಳ ಸಂಖ್ಯೆ ಕಡಿಮೆ ಇದ್ದರೂ ಕೊರೋನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯ ಸರ್ಕಾರ ಸೂಚಿಸಿದೆ. ಹಾಗಾಗಿ ಜನರು ಮಾಸ್ಕ್, ಸಾಮಾಜಿಕ ಅಂತರ ಪಾಲನೆ ಮಾಡಿ ಎಂದು ಸಚಿವರ ಸ್ಪಷ್ಟಪಡಿಸಿದ್ದಾರೆ.

ಬಿಬಿಎಂಪಿ ಅಧಿಕಾರಿಗಳ ಪ್ರತ್ಯೇಕ ಸಭೆ : ರಾಜ್ಯದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಹೆಚ್ಚಳದ ಜೋತೆ ಡೆಂಘಿ ಪ್ರಕರಣಗಳ ಸಂಖ್ಯೆ ಕೂಡ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ತಿಳಿಸಿದರು. ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಜಿನೋಮಿಕ್ ಸಿಕ್ವೆನ್ಸಿಂಗ್ ಲ್ಯಾಬ್ ಆರಂಭಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೊಸ ರೂಪಾಂತರಿ ತಳಿಗಳ ಪತ್ತೆಗೆ ಲ್ಯಾಬ್‍ನಿಂದ ಸಹಾಯವಾಗುತ್ತದೆ. ಉಳಿದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಇಲಾಖೆ ತೆಗೆದುಕೊಂಡಿದೆ ಎಂದು ವಿವರಿಸಿದರು. ತಾಂತ್ರಿಕ ಸಲಹಾ ಸಮಿತಿ ಸಭೆ ನಂತರ ಇಲಾಖೆಯ ಪರಿಶೀಲನಾ ಸಭೆಯನ್ನೂ ನಡೆಸಲಾಗಿದೆ. ವಿಶೇಷವಾಗಿ ನಮ್ಮ ಕ್ಲಿನಿಕ್‍ಗಳ ಆರಂಭಕ್ಕೆ ಕಾಲಮಿತಿಯಲಲಿ ತ್ವರಿತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

Recent Articles

spot_img

Related Stories

Share via
Copy link
Powered by Social Snap