ಬೆಂಗಳೂರು:
ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದ್ದು, ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ.ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ.
ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಬೆಂಗಳೂರು ನಗರ, ಬೆಂ. ಗ್ರಾಮಾಂತರ ಹಾಗೂ ಮಂಡ್ಯ ಸೇರಿದಂತೆ ಕೆಲವು ಕಡೆ ಭಾರೀ ಮಳೆಯಾಗಲಿದೆ. ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಮಳೆ ಮುನ್ಸೂಚನೆ ನೀಡದೆ.
ಬೆಂಗಳೂರಿನ ಹಲವೆಡೆ ಮಧ್ಯಾಹ್ನವೇ ಮಳೆ ಆರಂಭವಾಗಿದೆ. ವಿಜಯನಗರ, ದೀಪಾಂಜಲಿನಗರ, ಹೊಸಹಳ್ಳಿ, ಅತ್ತಿಗುಪ್ಪೆ ಸುತ್ತಮುತ್ತ ಗುಡುಗು ಸಹಿತ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಮಳೆ ಆರಂಭ ಹಿನ್ನಲೆ ಪ್ರಯಾಣಿಕರು, ವಾಹನ ಸಾವರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಮುಂಜಾಗ್ರತಾ ಕ್ರಮವಾಗಿ ಕೆ.ಆರ್, ಸರ್ಕಲ್ ಅಂಡರ್ ಪಾಸ್ ಕ್ಲೋಸ್ ಮಾಡಲಾಗಿದ್ದು, ಪೋಲಿಸರು ಬ್ಯಾರಿಕೇಟ್ ಹಾಕಿ ಕ್ಲೋಸ್ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ