ಬೆಂಗಳೂರು: ಪೊಲೀಸರಿಂದ 21 ಕೋಟಿ ಮೌಲ್ಯದ ‌ ಡ್ರಗ್ಸ್ ನಾಶ

ಬೆಂಗಳೂರು:

     ವಿಶ್ವ ಮಾದಕವಸ್ತುಗಳ ಸೇವನೆ ಮತ್ತು ಕಳ್ಳ ಸಾಗಣೆ ವಿರೋಧಿ ದಿನದ ನಿಮಿತ್ತ ವಿಶೇಷ ಅಭಿಯಾನ ನಡೆಸಿದ ನಗರದ ಪೊಲೀಸರು, ಸೋಮವಾರ ರೂ. 21 ಕೋಟಿ ಮೌಲ್ಯದ 2,117 ಕೆ.ಜಿ ಡ್ರಗ್ಸ್ ನಾಶಪಡಿಸಿದರು.

     ನಗರದ ವಿವಿಧೆಡೆ ವಿಶೇಷ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದ 2,053 ಕೆ.ಜಿ ಗಾಂಜಾ, 9 ಕೆ.ಜಿ ಹಶೀಷ್, 12 ಕೆ.ಜಿ ಅಫೀಮು, 9 ಕೆ.ಜಿ ಚರಸ್, 568 ಗ್ರಾಂ ಕೊಕೇನ್, 13 ಗ್ರಾಂ ಹೆರಾಯಿನ್, 5 ಕೆ.ಜಿ ಎಂಡಿಎಂಎ ಅನ್ನು ಕೋರ್ಟ್‌ ಆದೇಶ ಪಡೆದು ನಾಶಪಡಿಸಿದ್ದಾರೆ.

     ಡ್ರಗ್ಸ್ ಸಾಗಣೆ ಹಾಗೂ ಮಾರಾಟದ ವಿರುದ್ಧ 2022ರ ಜನವರಿಯಿಂದ 2023ರ ಜೂನ್‌ವರೆಗೆ 6,191 ಪ್ರಕರಣ ದಾಖಲಾಗಿದೆ. ಈ ಸಂಬಂಧ 7,723 ಭಾರತೀಯರು, 159 ವಿದೇಶಿಯರನ್ನು ಬಂಧಿಸಿದ್ದು,ರೂ. 117 ಕೋಟಿ ಮೌಲ್ಯದ 6,261 ಕೆ.ಜಿ ಡ್ರಗ್ಸ್ ಜಪ್ತಿ ಮಾಡಲಾಗಿದೆ.

    ಅಲ್ಲದೆ, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ 388 ಶಾಲೆಗಳು, 253 ಕಾಲೇಜುಗಳು ಮತ್ತು 51 ವೃತ್ತಿಪರ ಕಾಲೇಜುಗಳಿಗೆ ಭೇಟಿ ನೀಡಿದ್ದು, 1.73 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮಾದಕವಸ್ತು ಗಳಿಂದಾಗುವ ದುಷ್ಪರಿಣಾಮಗಳು ಮತ್ತು NDPS ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap