ಬೆಂಗಳೂರು:
ದೇಶಾದ್ಯಂತ ಹಿಂದೂಗಳು ರಾಮ ನವಮಿಯನ್ನು ಅದ್ದೂರಿಯಾಗಿ ಆಚರಿಸಿದ್ದು ಇನ್ನು ರಾಮನವಮಿಯನ್ನು ಮುಗಿಸಿಕೊಂಡು ಕಾರಿನಲ್ಲಿ ಹೋಗುತ್ತಿದ್ದವರನ್ನು ಅಡ್ಡಗಟ್ಟಿದ ಮುಸ್ಲಿಂ ಯುವಕರು ಪುಂಡಾಟ ನಡೆಸಿದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದ ಬೆಟ್ಟಳ್ಳಿ ಮಸೀದಿ ಬಳಿ ನಡೆದಿದೆ.
ಕಾರನ್ನು ತಡೆದು ನಿಲ್ಲಿಸಿದ ಪುಂಡರು ಕಾರಿನ ಬಳಿ ಬಂದು ಜೈ ಶ್ರೀರಾಮ್ ಎಂದು ಹೇಳಬೇಕಾ, ಜೈ ಶ್ರೀ ರಾಮ್ ಅಲ್ಲ. ಓನ್ಲೀ ಅಲ್ಲಾಹು ಅಕ್ಬರ್ ಎಂದು ಕೂಗಿದ್ದಾರೆ. ಅಷ್ಟೇ ಅಲ್ಲದೆ ಕಾರಿನಲ್ಲಿ ಇದ್ದವರಿಗೆ ಅವಾಚ್ಯವಾಗಿ ನಿಂದಿಸಿದ್ದು ಅಲ್ಲದೆ ಹಲ್ಲೆ ಕೂಡ ನಡೆಸಿದ್ದಾರೆ. ಯುವಕರ ಪುಂಡಾಟದಿಂದ ಗರಂ ಆದ ಕಾರಿನಲ್ಲಿದ್ದ ಯುವಕರು ನಿಮ್ಮ ಹಬ್ಬದಲ್ಲಿ ನಾವು ಹೀಗೆ ಮಾಡುತ್ತೀವಾ ಎಂದು ಪ್ರಶ್ನೆ ಮಾಡಿದ್ದಾರೆ. ಆಗ ಅಲ್ಲೆ ಇದ್ದ ಮತ್ತೆ ಇಬ್ಬರು ಸೇರಿಕೊಂಡು ಮೂವರು ಹಿಂದು ಯುವಕರ ಮೇಲೆ ಹಲ್ಲೆ ಮಾಡಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸದ್ಯ ಪುಂಡಾಟ ಮಾಡಿದವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.