ಬಿ.ಎಸ್. ಯಡಿಯೂರಪ್ಪ ನಿರ್ಗಮನದ ಬಳಿಕ ಸವಾಲಿನ ಸನ್ನಿವೇಶದಲ್ಲಿ ಮುಖ್ಯಮಂತ್ರಿ ಹುದ್ದೆ ಅಲಕಂರಿಸಿದ ಬಸವರಾಜ ಬೊಮ್ಮಾಯಿ ಇಂದಿಗೆ ಮುಖ್ಯಮಂತ್ರಿಯಾಗಿ 6 ತಿಂಗಳು ಪೂರೈಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ 6 ತಿಂಗಳು ಪೂರೈಸುತ್ತಿದ್ದಾರೆ.
ಜೊತೆಗೆ ಅವರ 62 ನೇ ಹುಟ್ಟು ಹಬ್ಬ ಕೂಡ ಇದೆ. ಹುಟ್ಟು ಹಬ್ಬ ಆಚರಿಸಿಕೊಳ್ಳದಿದ್ದರೂ ರಾಜ್ಯ ಸರ್ಕಾರದ 6 ತಿಂಗಳ ಸಾಧನೆಯ ಸಂಭ್ರಮವನ್ನು ಸರಳವಾಗಿ ಆಚರಿಸಲು ನಿರ್ಧರಿಸಿದ್ದಾರೆ.
ಇಂದು ಸಿಎಂ ಸಾಧನಾ ಪುಸ್ತಕ ಲೋಕಾರ್ಪಣೆ
ತಮ್ಮ ನೇತೃತ್ವದ ಸರ್ಕಾರ 6 ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಸರ್ಕಾರದ ಸಾಧನೆಗಳನ್ನು ಒಳಗೊಂಡ ಭವ್ಯ ಭವಿಷ್ಯದ ಭರವಸೆಯ ಹೆಜ್ಜೆಗಳು ಎಂಬ ಶೀರ್ಷಿಕೆಯುಳ್ಳ ಸಾಧನಾ ಪುಸ್ತಕವನ್ನು ವಿಧಾನಸೌಧದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಬಿಡುಗಡೆಗೊಳಿಸಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ