ಬ್ರಿಜ್‌ ಭೂಷಣ್‌ ಅವರನ್ನು ರಕ್ಷಿಸಲು ಕೇಂದ್ರ ಯತ್ನಿಸುತ್ತಿದೆ : ವಿನೀಶ್‌ ಪೊಗಟ್

ನವದೆಹಲಿ:

      ಉತ್ತರ ಪ್ರದೇಶದ ಭಾರತೀಯ ಜನತಾ ಪಕ್ಷದ ಸಂಸದ ಹಾಗೂ ನಿರ್ಗಮಿತ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ರನ್ನು ರಕ್ಷಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕುಸ್ತಿಪಟು ವಿನೇಶ್ ಪೊಗಟ್ ಆರೋಪಿಸಿದ್ದಾರೆ.

     ಜೂನ್ 15ರೊಳಗೆ ಬ್ರಿಜ್ ಭೂಷಣ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಜೂನ್ 7ರಂದು ಭರವಸೆ ನೀಡಿದ ನಂತರ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದರು. ಏಪ್ರಿಲ್ 23ರಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧ ಕುಸ್ತಿಪಟುಗಳು ಪ್ರತಿಭಟನೆಯನ್ನು ಪುನರಾರಂಭಿಸಿದಾಗಿನಿಂದ ಬ್ರಿಜ್ ಭೂಷಣ್ ರನ್ನು ಬಂಧಿಸುವಂತೆ ಒತ್ತಾಯಿಸುತ್ತಿದ್ದಾರೆ.
 
     ಮುಂಬರುವ ಡಬ್ಲ್ಯುಎಫ್‌ಐ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಅವರ ಯಾವುದೇ ಕುಟುಂಬದ ಸದಸ್ಯರು ಅಥವಾ ಸಹವರ್ತಿಗಳಿಗೆ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂಬುದೂ ಸೇರಿದಂತೆ ಕುಸ್ತಿಪಟುಗಳ ಹಲವಾರು ಬೇಡಿಕೆಗಳನ್ನು ಸರ್ಕಾರ ಒಪ್ಪಿಕೊಂಡಿದೆ. ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ನೇತೃತ್ವದ ಕುಸ್ತಿಪಟುಗಳು ಸಿಂಗ್ ಅವರನ್ನು ಕಂಬಿ ಹಿಂದೆ ಹಾಕುವವರೆಗೂ ತಮ್ಮ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

 

    ಡಬ್ಲ್ಯುಎಫ್‌ಐ ಮುಖ್ಯಸ್ಥ ಏಕೆ ಬಂಧಿಸುತ್ತಿಲ್ಲ ಎಂದು ನೀವು ಅಮಿತ್ ಶಾ ಅವರನ್ನು ಕೇಳಬೇಕು. ಅವರು ಎಷ್ಟು ಶಕ್ತಿಯುತ ವ್ಯಕ್ತಿಯಾಗಿದ್ದು, ಅವರನ್ನು ರಕ್ಷಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಅವರನ್ನು ಬಂಧಿಸುವುದು ಸುಲಭವಲ್ಲ, ಆದರೆ ನಾವು ನಮ್ಮ ಹೋರಾಟವನ್ನು ಮುಂದುವರಿಸುತ್ತಿದ್ದೇವೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link