ಬೆಂಗಳೂರು : ಮೂರು ಪಂದ್ಯಗಳ ಟಿ20 ಸರಣಿಯ ಆರಂಭಿಕ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿದಿರುವ ಭಾತರ ತಂಡ ಇಂದು (ಶನಿವಾರ) ದ್ವಿತೀಯ ಕದನಕ್ಕೆ ಸಜ್ಜಾಗಿದೆ.
ಈ ಪಂದ್ಯದಲ್ಲಿ ಗೆದ್ದರೆ ಸರಣಿ ಟೀಂ ಇಂಡಿಯಾ ಕೈವಶವಾಗಲಿದೆ. ಆದರೆ, ಮೊದಲ ಪಂದ್ಯದಿಂದ ಹೊರಗುಳಿದಿದ್ದ ಸ್ಟಾರ್ ಆಟಗಾರರು ಈ ಪಂದ್ಯಕ್ಕೆ ಮರಳಿದ್ದು, ಮ್ಯಾನೇಜ್ ಮೆಂಟ್ ಗೆ ತಂಡದ ಆಯ್ಕೆಯೇ ಸವಾಲಾಗಿ ಪರಿಣಮಿಸಿದೆ. ಇಂದಿನ ಪಂದ್ಯದಲ್ಲಿ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ, ರಿಷಭ್ ಪಂತ್, ಶ್ರೇಯಸ್ ಐಯ್ಯರ್ ಆಯ್ಕೆಗೆ ಲಭ್ಯವಾಗಲಿದ್ದಾರೆ. ತಂಡಕ್ಕೆ ಬುಮ್ರಾ ಸೇರ್ಪಡೆ ಖಚಿವಾಗಿದ್ದು ಚೊಚ್ಚಲ ಪಂದ್ಯದಲ್ಲೇ ಉತ್ತಮ ಪ್ರದರ್ಶನ ತೋರಿದ ಅರ್ಷದೀಪ್ ಸಿಂಗ್ ಹೊರಗುಳಿಯಲಿದ್ದಾರೆ. ಅಲ್ರೌಂಡರ್ ಅಕ್ಷರ್ ಪಟೇಲ್ ಸ್ಥಾನದಲ್ಲಿ ರವೀಂದ್ರ ಜಡೇಜಾ ಕಾಣಿಸಿಕೊಳ್ಳುವುದು ಖಚಿತ.
ಸಂಭಾವ್ಯ ತಂಡ:
ಭಾರತ: ರೋಹಿತ್ ಶರ್ಮಾ (ಸಿ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿ.ಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಹಾಲ್.
ಇಂಗ್ಲೆಂಡ್: ಜೋಸ್ ಬಟ್ಲರ್ ( ಕ್ಯಾಪ್ಟನ್, ವಿ.ಕೀ), ಜೇಸನ್ ರಾಯ್, ಡೇವಿಡ್ ಮಲಾನ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‍ಸ್ಟೋನ್, ಹ್ಯಾರಿ ಬ್ರೂಕ್, ಸ್ಯಾಮ್ ಕುರಾನ್, ಕ್ರಿಸ್ ಜೋರ್ಡಾನ್, ಟೈಮಲ್ ಮಿಲ್ಸ್, ರೀಸ್ ಟೋಪ್ಲಿ, ಮಾರ್ಕ್ ಪಾರ್ಕಿನ್ಸನ್.
