ಭ್ರಷ್ಟಾಚಾರದಿಂದ ಬಿಡಿಎಯನ್ನು ಸ್ವಚ್ಛಗೊಳಿಸಲಾಗುವುದು : ಡಿಸಿಎಂ

ಬೆಂಗಳೂರು:

     ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವನ್ನು (ಬಿಡಿಎ) ಭ್ರಷ್ಟಾಚಾರದಿಂದ ಮುಕ್ತಗೊಳಿಸಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸೋಮವಾರ ಹೇಳಿದರು.

     ನಿನ್ನೆಯಷ್ಟೇ ಬಿಡಿಎ ಅಧಿಕಾರಿಗಳೊಂದಿಗೆ ಡಿಕೆ.ಶಿವಕುಮಾರ್ ಅವರು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. 2 ಗಂಟೆಗಳ ಕಾಲ ಅಧಿಕಾರಿಗಳೊಂದಿಗೆ ಸುದೀರ್ಘ ಮಾತುಕತೆ ನಡೆಸಿದರು.

     ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಈಗಾಗಲೇ ಆದೇಶ ಹೊರಡಿಸಿದ್ದಾರೆ. ಎಲ್ಲೆಡೆ ಭ್ರಷ್ಟ ಅಧಿಕಾರಿಗಳಿದ್ದಾರೆ. ಅವರಲ್ಲಿ ಬಹುತೇಕ ಅಧಿಕಾರಿಗಳನ್ನು ಬದಲಿಸಲಾಗುವುದು ಎಂದು ಹೇಳಿದರು.

    ಬಿಡಿಎಯ ಎಲ್ಲ ಚಾಲ್ತಿ ಯೋಜನೆಗಳ ವಿವರ ಸಿಕ್ಕಿದ್ದು, ದಿಕ್ಕು ತೋಚದಂತಿರುವಂತೆ ತೋರುತ್ತಿದೆ. ಒಂದಿಷ್ಟು ಕೆಲಸಗಳಾಗಬೇಕು, ಸಂಚಾರ ದಟ್ಟಣೆ ಇರುವ ಪ್ರದೇಶಗಳನ್ನು ಗುರುತಿಸಿ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅದನ್ನು ಸುಧಾರಿಸಲು ಬಿಡಿಎ ಕೆಲವು ಯೋಜನೆಗಳನ್ನು ಕೈಗೊಳ್ಳಬಹುದು ಎಂದು ತಿಳಿಸಿದರು.

    ಭ್ರಷ್ಟಾಚಾರದಿಂದ ಬಿಡಿಎಯನ್ನು ಸ್ವಚ್ಛಗೊಳಿಸುವುದಾಗಿ ಸಭೆಯಲ್ಲಿ ಉಪ ಮುಖ್ಯಮಂತ್ರಿಗಳು ಒತ್ತಿ ಹೇಳಿದರು. ಇನ್ನು ಮುಂದೆ ಯಾವುದೇ ಅಕ್ರಮಕ್ಕೆ ಅವಕಾಶ ನೀಡುವುದಿಲ್ಲ. ಯಾವುದೇ ಅಕ್ರಮದಲ್ಲಿ ತೊಡಗಿಸಿಕೊಳ್ಳುವ ಬದಲು ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರುವಂತೆ ಸೂಚಿಸಿದರು ಎಂದು ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

    ಆರ್‌ಎಂಪಿ 2041 ಮತ್ತು ಪೆರಿಫೆರಲ್ ರಿಂಗ್ ರೋಡ್ ಯೋಜನೆಗೆ ಆದ್ಯತೆ ನೀಡಬೇಕು. “ಬಿಡಿಎ ತನ್ನ ವಾಣಿಜ್ಯ ಸಂಕೀರ್ಣಗಳಂತಹ ಇತರ ಆದಾಯವನ್ನು ಗಳಿಸುವ ಆಯ್ಕೆಗಳ ಮೇಲೆ ಕೇಂದ್ರೀಕರಿಸುವ ಮೂಲಕ ತನ್ನನ್ನು ತಾನೇ ಸ್ವಾವಲಂಬಿಯನ್ನಾಗಿ ಮಾಡಬೇಕೆಂದು. ಎಲ್ಲಾ ಯೋಜನೆಗಳನ್ನು ವಿಶೇಷವಾಗಿ ಅರ್ಕಾವತಿ ಲೇಔಟ್ ತ್ವರಿತಗೊಳಿಸಬೇಕು, ಇದರಿಂದ ಭೂಮಿ ಕಳೆದುಕೊಂಡ ರೈತರಿಗೆ ಶೀಘ್ರದಲ್ಲೇ ನ್ಯಾಯ ಸಿಗುತ್ತದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap