ಬೆಂಗಳೂರು: ಇತ್ತೀಚಿನ ಮಳೆಯಿಂದಾದ ಹಾನಿ ಕುರಿತು ವಿವರಗಳನ್ನು ಪಡೆದುಕೊಳ್ಳಲು ಹಾಗೂ ಮಂಕಿಪಾಕ್ಸ್ ಬಗ್ಗೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಆರೋಗ್ಯ ಸಚಿವರು ಹಾಗೂ ಇಲಾಖೆಯೊಂದಿಗೆ ನಾಳೆ ಎರಡು ಸಭೆಗಳನ್ನು ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಇಂದು ಕೊಪ್ಪಳ ಜಿಲ್ಲೆಗೆ ಪ್ರವಾಸ ಮಾಡಲಿದ್ದು, ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸ್ಥಳ ವೀಕ್ಷಣೆ ಮಾಡಲಿದ್ದೇನೆ. ಬೆಟ್ಟದ ಅಭಿವೃದ್ಧಿಗೆ ಈಗಾಗಲೇ 100 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗಿದೆ ಎಂದರು.
ಆದಷ್ಟೂ ಬೇಗ 100 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು ಅನುಮತಿ ನೀಡಲಾಗಿದೆ. ಭೂಸ್ವಾಧೀನದ ಕೆಲಸಗಳು ಬಾಕಿ ಇದ್ದು, ಕಾಮಗಾರಿ ಯನ್ನು ಆದಷ್ಟೂ ಬೇಗ ಪ್ರಾರಂಭಿ ಸಲಾಗುವುದು ಎಂದು ಹೇಳಿದರು.