ಮಂಗಳವಾರದಿಂದ ಬರ ಅಧ್ಯಯನ ಪ್ರವಾಸ : ಆರ್‌ ಅಶೋಕ್‌

ಬೆಂಗಳೂರು

    ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಮಂಗಳವಾರದಿಂದ ಅಧ್ಯಯನ ಪ್ರವಾಸ ಕೈಗೊಳ್ಳುವುದಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.

    ವಿಜಯನಗರದ ಆದಿಚುಂಚನಗಿರಿ ಶಾಖ ಮಠದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರ ಜೊತೆ ಮಾತನಾಡಿದ್ದು, ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡುತೇವೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪರಿಹಾರ ನೀಡದೆ,

    ಕೇಂದ್ರ ಸರ್ಕಾರದ ಕಡೆ ಸರ್ಕಾರ ಬೆರಳು ಮಾಡುತ್ತಿದೆ. ಎಲ್ಲ ಶಾಸಕರಿಗೆ ಅಧ್ಯಯನ ಮಾಡಿಕೊಂಡು ವರದಿ ಸಿದ್ದಮಾಡಿಕೊಂಡು ಬರುವಂತೆ ಹೇಳಿದ್ದೇನೆ ಎಂದು ಹೇಳಿದರು. ರಾಜ್ಯದ ಕಾಂಗ್ರೆಸ್ ಸರ್ಕಾರ ನಿದ್ದೆ ಮಾಡುತ್ತಿದ್ದು, ಎಚ್ಚರಿಸುವ ಕೆಲಸ ಮಾಡಬೇಕಿದೆ. ಸರ್ಕಾರಕ್ಕೆ ಕಿವಿ ಹಿಂಡುವ ಕೆಲಸ ಮಾಡುತ್ತೇವೆ. ಆದರೂ ಎಚ್ಚರವಾಗದಿದ್ದರೆ ಬೇರೆ ಮದ್ದು ಹುಡುಕುತ್ತೇವೆ. ಎಲ್ಲ ವಿಚಾರವನ್ನು ವಿಧಾನ ಮಂಡಲದ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ ಎಂದರು.

    ಸಮರ್ಥ ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡುವ ಪ್ರಯತ್ನ ಮಾಡುತ್ತೇನೆ. ಸದನದಲ್ಲಿ ಸಚಿವ ಜಮೀರ್ ಅಹಮದ್ ಹೇಳಿಕೆ ವಿಚಾರ ಚರ್ಚೆ ಮಾಡುತ್ತೇವೆ. ರಾಜ್ಯದ ಜನರ ಸಮಸ್ಯೆ ವಿಚಾರವಾಗಿ ಸದನದಲ್ಲಿ ನಿಲುವಳಿ ಸೂಚನೆ ಮಂಡಿಸುತ್ತೇವೆ. ಉತ್ತರ ಕರ್ನಾಟಕದ ವಿಚಾರಕ್ಕೆ ಹೆಚ್ಚು ಒತ್ತು ಕೊಡುತ್ತೇವೆ. ಜೆಡಿಎಸ್ ಕೂಡ ಬೆಂಬಲ ನೀಡಲಿದ್ದು, ಬರ ಸೇರಿದಂತೆ ರಾಜ್ಯಕ್ಕೆ ಸಂಬAಧಿಸಿದ ವಿಚಾರದ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು.

    ತಂಡವಾಗಿ ಎಲ್ಲರೂ ಕೆಲಸ ಮಾಡುತ್ತೇವೆ. ಕಲ್ಯಾಣ ಕರ್ನಾಟಕದಿಂದ ಪ್ರವಾಸ ಕೈಗೊಂಡು, ಪಕ್ಷದ ಅಸಮಾಧಾನಿತರ ಜೊತೆ ಮಾತನಾಡುತ್ತೇನೆ. ಅವರ ಮನೆಗೇ ಹೋಗಿ ಮಾತಾಡಲಾಗುವುದು. ಯಾರೂ ಪಕ್ಷದ ವಿರುದ್ಧ ಮಾತನಾಡಿಲ್ಲ. ಮಾಜಿ ಸಚಿವ ವಿ.ಸೋಮಣ್ಣ ಸೇರಿದಂತೆ ಎಲ್ಲರ ಜೊತೆ ಚರ್ಚೆ ಮಾಡುವುದಾಗಿ ತಿಳಿಸಿದರು.

    ವಿಧಾನಸಭೆ ಚುನಾವಣೆಯಲ್ಲಿ ಕಾರಣಾಂತರಗಳಿಂದ ಸೋಮಣ್ಣ ಅವರಿಗೆ ಸೋಲಾಗಿದೆ. ನಾನು ಅವರು ಸಹೋದರರ ರೀತಿ ಇದ್ದೇವೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ದತ್ತಮಾಲೆ ಧರಿಸುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಹಳಷ್ಟು ಜನ ಭಾರತ ಮಾತಾಕಿ ಜೈ ಎನ್ನಲು ಆರಂಭಿಸಿದ್ದಾರೆ. ಕುಮಾರಸ್ವಾಮಿ ದತ್ತಮಾಲೆ ಧರಿಸುತ್ತೇನೆ ಎಂದು ಹೇಳಿರುವುದನ್ನು ಸ್ವಾಗತಿಸಲಾಗುವುದು. ಇದು ಭಾರತದ ಪರಂಪರೆ.

   ನಮ್ಮ ತಂದೆ, ಅಜ್ಜ ಎಲ್ಲರೂ ಮಾಲೆ ಧರಿಸಿದ್ದರು. ಶಿವಮಾಲೆ, ದತ್ತಮಾಲೆ, ಶಬರಿ ಮಾಲೆ ಹೀಗೆ ಅನೇಕ ಮಾಲೆ ಧರಿಸುವುದು ನಮ್ಮ ಪರಂಪರೆ. ದೇವರ ಮೇಲೆ ಭಕ್ತಿ ತೋರಿಸುವುಕ್ಕೆ ಭೇದ ಭಾವ ಬೇಡ ಮಾಡುವುದು ಬೇಡ. ಆ ರೀತಿ ಮಾಡುವುದು ಏನಿದ್ದರು ಕಾಂಗ್ರೆಸ್ ಎಂದು ಆರೋಪಸಿದರು. ಹಿಂದೂ ದ್ವೇಷ ಮಾಡೋದು, ಮುಸ್ಲಿಂರಿಗೆ ಸೆಲ್ಯುಟ್ ಹೊಡೆದು ನಿಲ್ಲಬೇಕು ಎಂಬ ದುರಹಂಕಾರದ ಹೇಳಿಕೆಗೆ ನಮ್ಮಲ್ಲಿ ಅವಕಾಶ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

   ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ. ಸಮರ್ಥ ವಿರೋಧಪಕ್ಷದ ನಾಯಕನಾಗಿ ಕೆಲಸ ಮಾಡಿ ಎಂದು ಹೇಳಿದ್ದಾರೆ. ನಿನ್ನೆ ಸುತ್ತೂರು ಶ್ರೀಗಳಿಗೆ ಕರೆ ಮಾಡಿದ್ದೆ. ಎಲ್ಲ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುತ್ತೇನೆ ಎಂದರು. ಇದೇ ಸಂದರ್ಭದಲ್ಲಿ ಶಾಸಕರಾದ ಕೆ.ಗೋಪಾಲಯ್ಯ ಎಸ್. ಮುನಿರಾಜು ಹಾಗೂ ಮುಖಂಡರು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap