ಬೆಂಗಳೂರು:
ಬೆಂಗಳೂರಿನಲ್ಲಿ ಶೇ. 53 ರಷ್ಟು ಮಾತ್ರ ಮತದಾನವಾಗಿರುವುದು ಬೇಸರದ ಸಂಗತಿ ರಜೆ ಘೋಷಣೆಯಾಗಿದ್ದರೂ ಸಮೇತ ಈ ಪರಿಯ ಮತದಾನ ಬೇಸರ ತಂದಿದೆ ಎಂದು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವೆ, ಬೆಂಗಳೂರಿನಲ್ಲಿ ಶೇ. 53 ರಷ್ಟು ಮಾತ್ರ ಮತದಾನವಾಗಿರುವುದು ಬೇಸರದ ಸಂಗತಿ. ರಾಜ್ಯ ಸರ್ಕಾರ ರಜೆ ಘೋಷಣೆ ಮಾಡಿದ್ದರೂ ಜನ ಮತ ಹಾಕಿಲ್ಲ. ಮುಂದೆ ಆದರೂ ಬೆಂಗಳೂರಿನ ಜನ ಮತ ಹಾಕಲು ಬರಲಿ ಎಂದಿದ್ದಾರೆ.ಇದೇ ವೇಳೆ ಚುನಾವಣೋತ್ತರ ಸಮೀಕ್ಷೆಗಳ ಬಗ್ಗೆ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ ಅವರು, ನಮ್ಮ ವರದಿ ಪ್ರಕಾರ ಬಿಜೆಪಿಗೆ 120-125 ಸ್ಥಾನ ಬರುತ್ತದೆ ಎಂದು ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸ್ವಂತ ಬಲದಲ್ಲಿ ನಾವೇ ಸರ್ಕಾರ ರಚನೆ ಮಾಡ್ತೇವೆ. ಜನ ಎಕ್ಸಿಟ್ ಪೋಲ್ ಸುಳ್ಳು ಮಾಡ್ತಾರೆಂದು ಮೊದಲೇ ಹೇಳಿದ್ದೆ. ಈಗಲೂ ನನಗೆ ಅದೇ ವಿಶ್ವಾಸವಿದೆ. ಬಿ.ಎಸ್.ಯಡಿಯೂರಪ್ಪನವರ ವರದಿ ಯಾವತ್ತೂ ಸುಳ್ಳಾಗಿಲ್ಲ ಎಂದರು.
