ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ

ದೆಹಲಿ:
      ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಕುಸಿತದಿಂದ ಇಂಧನ ದರದಲ್ಲಿ ಇಂದೂ ಕೂಡ ಏರಿಕೆಯಾಗಿದೆ.
      ಇಂದು ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 28 ಪೈಸೆ ಮತ್ತು ಡೀಸೆಲ್ ದರದಲ್ಲಿ​ 22 ಪೈಸೆ ಏರಿಕೆಯಾಗಿದೆ. ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ಬೆಲೆ 88.67 ರೂ. ಹಾಗೂ ಡೀಸೆಲ್​ 77.82 ರೂ ಇದ್ದರೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್​ 81.28 ರೂ. ಮತ್ತು ಡೀಸೆಲ್ ದರ​ 73.30 ರೂ. ಆಗಿದೆ. ಕೋಲ್ಕತಾದಲ್ಲಿ ಒಂದು ಲೀಟರ್​ ಪೆಟ್ರೋಲ್​ ದರ 82.87 ರೂ. ಮತ್ತು ಡೀಸೆಲ್ ದರ 75.15 ರೂ. ಆಗಿದೆ. ಇನ್ನು ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 83.64 ರೂ. ಇದ್ದರೆ, ಡೀಸೆಲ್ ಬೆಲೆ 75.43 ರೂ. ಇದೆ.
    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap