ಮಹಿಳೆಯರಿಗೆ ಮೀಸಲಾತಿ ನೀಡುವ ಮಸೂದೆ ಮಂಡನೆ ಸ್ವಾಗತಾರ್ಹ : ಹೆಚ್‌ ಡಿ ಕೆ

ಬೆಂಗಳೂರು

    ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆ ಲೋಕಸಭೆಯಲ್ಲಿ ಮಂಡನೆ ಆಗುತ್ತಿರುವುದನ್ನು ನಾನು ಮುಕ್ತವಾಗಿ ಸ್ವಾಗತಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಹೇಳಿದ್ದಾರೆ.

     ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಎಚ್.ಡಿ. ದೇವೇಗೌಡರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿಯೇ 1996 ಸೆಪ್ಟೆಂಬರ್ 12ರಂದು ರಾಜ್ಯಸಭೆಯಲ್ಲಿ ಈ ಐತಿಹಾಸಿಕ ಮಸೂದೆ ಮಂಡಿಸಲಾಗಿತ್ತು. ಆದರೆ, ಅವರ ಸಂಯುಕ್ತರAಗ ಸರಕಾರದ ಮೈತ್ರಿಕೂಟದ ಕೆಲ ಮಿತ್ರಪಕ್ಷಗಳೇ ತೀವ್ರ ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಆ ಮಸೂದೆ ಅಂಗೀಕಾರ ಆಗಲಿಲ್ಲ.

    ಇವತ್ತು ಕಾಂಗ್ರೆಸ್ಸಿನ ಇಂಡಿಯಾ ಮೈತ್ರಿಕೂಟವನ್ನು ಸೇರಿಕೊಂಡಿರುವ ನಾಯಕರೇ ಅಂದು ಈ ಮಸೂದೆಗೆ ತಡೆ ಒಡ್ಡಿದ್ದರು. 27 ವರ್ಷಗಳ ನಂತರ ಮಾನ್ಯ ದೇವೇಗೌಡರ ಕನಸಿಗೆ ಮರುಜೀವ ಬಂದಿರುವುದು ನನಗೆ ಸಂತೋಷ ಉಂಟು ಮಾಡಿದೆ ಎಂದು ಹೇಳಿದರು.

    1995ರಲ್ಲಿ ಮಾನ್ಯ ದೇವೇಗೌಡರು ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲು ನೀಡಿ, ಅಧಿಕಾರ ನಡೆಸುವ ಹಕ್ಕು ಕಲ್ಪಿಸಿ ಮಹಿಳಾ ಸಬಲೀಕರಣದ ಸುವರ್ಣ ಅಧ್ಯಾಯಕ್ಕೆ ನಾಂದಿ ಹಾಡಿದ್ದರು. ಅಂದು ನಮ್ಮ ರಾಜ್ಯದಲ್ಲಿ ಘಟಿಸಿದ ಈ ಕ್ರಾಂತಿಕಾರಿ ವಿದ್ಯಮಾನವನ್ನು ಇಡೀ ದೇಶವೇ ಬೆರಗು ಕಂಗಳಿಂದ ನೋಡಿತ್ತು.

    ಇಂದು ಮಹಿಳಾ ಮೀಸಲು ಮಸೂದೆ ಲೋಕಸಭೆಯಲ್ಲಿ ಅಂಗೀಕಾರ ಆಗುವುದು ಖಚಿತವಾಗಿದ್ದು, ಈ ಮೂಲಕ ಮಾಜಿ ಪ್ರಧಾನಿಗಳ ಕನಸು ನನಸಾಗುತ್ತಿದೆ. ಮಹಿಳೆಯರಿಗೆ ಸಮಾನ ಹಕ್ಕು, ಅವಕಾಶಗಳನ್ನು ಕಲ್ಪಿಸುವುದು ಇಂದಿನ ತುರ್ತು. ಕೇಂದ್ರ ಸಂಪುಟ ಕೈಗೊಂಡ ನಿರ್ಧಾರ ಶ್ಲಾಘನೀಯ. ರಾಜಕೀಯಕ್ಕೆ ಅತೀತವಾಗಿ ಈ ಮಸೂದೆಯನ್ನು ಎಲ್ಲಾ ಪಕ್ಷಗಳು ಬೆಂಬಲಿಸಬೇಕು ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap